ಮೈಸೂರು:ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ರಂಜಾನ್​ ಹಬ್ಬದ ವೇಳೆ ‘ಕವಲಂದೆ ಮಿನಿ ಪಾಕಿಸ್ತಾನ’ ಎಂದು ಘೋಷಣೆ ಕೂಗಿದ್ದ ಆರೋಪಿಗಳಿಬ್ಬರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ಫಯಾಜ್ ಶರೀಫ್, ಹನನ್ ಆಲಿ ಖಾನ್ ಬಂಧಿತರು. ಇವರಿಬ್ಬರೂ ಗ್ರಾಮದಲ್ಲೇ ಕೂಲಿ ಕೆಲಸ ಮಾಡಿಕೊಂಡಿದ್ದವರು. ಒಬ್ಬನ ವಿದ್ಯಾಭ್ಯಾಸ ಎಸ್ಸೆಸ್ಸೆಸ್ಸೆ ಅಪೂರ್ಣ. ಮತ್ತೊಬ್ಬ ಐಟಿಐ ಫೇಲ್‌.
ರಂಜಾನ್ ಪ್ರಯುಕ್ತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆ ಹೊರಟಿದ್ದ ಸಂದರ್ಭದಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬ “ಕವಲಂದೆ ಮಿನಿ ಪಾಕಿಸ್ತಾನ” ಎಂದು ಹೇಳಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.
ದೊಡ್ಡಕವಲಂದೆ ಗ್ರಾಮದಲ್ಲಿ ಮುಸ್ಲಿಮರಿಗಿಂತ ಹಿಂದುಗಳ ಸಂಖ್ಯೆಯೂ ಹೆಚ್ಚಿದೆ. ಹೀಗಿರುವಾಗ ಮಿನಿ ಪಾಕಿಸ್ತಾನ ಎಂದು ಹೇಳಿರುವುದು ಮುಸ್ಲಿಮರ ವಿಕೃತ ಮನಸ್ಥಿತಿಯನ್ನು ತೋರುತ್ತಿದೆ. ಅವರಿಗೆ ಭಾರತ ದೇಶದ ಬಗ್ಗೆ ಕಿಂಚಿತ್ತೂ ಅಭಿಮಾನ ಇಲ್ಲದಿರುವುದು ಅವರ ಮಾತಿನಿಂದ ಸ್ಪಷ್ಟವಾಗಿದೆ. ಈ ರೀತಿ ಹೇಳಿಕೆ ನೀಡಿ ವಿಡಿಯೋ ಮಾಡಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಿ ದೇಶದ್ರೋಹ ಕೇಸ್​ ದಾಖಲಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂದುಪರ ಸಂಘಟನೆಗಳ ಪ್ರಮುಖರು ಆಗ್ರಹಿಸಿದ್ದರು. ಈ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಾದಪ್ಪ ಮೆಚ್ಚುವಂತಹದ್ದು ನೌಕರನ ಪ್ರಾಮಾಣಿಕತೆ! ವಸತಿಗೃಹದಲ್ಲಿ ಸಿಕ್ಕ 100 ಗ್ರಾಂ ಚಿನ್ನ ಕೊನೆಗೂ ಮಾಲೀಕರ ಕೈ ಸೇರಿತು
ಕನ್ನಡದ ಕೋಟ್ಯಧಿಪತಿ ಖ್ಯಾತಿಯ ಲೈನ್​ಮನ್ ಆತ್ಮಹತ್ಯೆ! ಗೃಹಪ್ರವೇಶಕ್ಕೂ 2 ದಿನ ಮೊದಲೇ ದುರಂತ, ಆ ರಾತ್ರಿ ತೋಟದಲ್ಲಿ…
ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + twenty =
Remember me
