ಮೈಸೂರು:ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವ ಸಮಾರಂಭದಲ್ಲಿ ನಟ ಪುನೀತ್​ ರಾಜ್​ಕುಮಾರ್(ಮರಣೋತ್ತರ), ​ವಿಜ್ಞಾನಿ ಡಾ.ವಿ.ಕೆ.ಆತ್ರಿ ಮತ್ತು ಜಾನಪದ ಕಲಾವಿದ ಎಂ.ಮಹದೇವಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಅಪ್ಪು ಅವರಿಗೆ ಮರಣೋತ್ತರವಾಗಿ ನೀಡಿದ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸ್ವೀಕರಿಸಿದರು.
ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್​ನಲ್ಲಿ ಮಂಗಳವಾರ ಘಟಿಕೋತ್ಸವ ಸಮಾರಂಭ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಡಾ.ರಾಜ್​ಕುಮಾರ್ ಕುಟುಂಬಸ್ಥರು ಆಗಮಿಸಿದರು. ನಟ ರಾಘವೇಂದ್ರ ರಾಜ್​ಕುಮಾರ್ ಮತ್ತು ಪತ್ನಿ, ನಟ ವಿನಯ್ ರಾಜ್​ಕುಮಾರ್, ಪುನೀತ್​ರ ಅಕ್ಕ ಲಕ್ಷ್ಮೀ ಗೋವಿಂದು ಮತ್ತು ಮೊಮ್ಮಕ್ಕಳು ಉಪಸ್ಥಿತರಿದ್ದರು.

‌ಇತ್ತೀಚೆಗೆ ಅಶ್ವಿನಿ ಅವರನ್ನು ಭೇಟಿಯಾಗಿದ್ದ ಕುಲಪತಿ ಪ್ರೊ.ಹೇಮಂತ್ ಕುಮಾರ್​ ನೇತೃತ್ವದ ನಿಯೋಗ, ಪುನೀತ್​ ಅವರಿಗೆ ಗೌರವ ಡಾಕ್ಟರೇಟ್ ಕೊಡುವ ​ಬಗ್ಗೆ ಚರ್ಚಿಸಿತ್ತು. ಶತಮಾನೋತ್ಸವ ಪೂರೈಸಿರುವ ಮೈಸೂರು ವಿವಿಯು ಈ ಬಾರಿ ಅಪ್ಪು ಅವರಿಗೆ ಡಾಕ್ಟರೇಟ್ ಪದವಿ ಕೊಟ್ಟದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಪುನೀತ್​ ರಾಜ್​ಕುಮಾರ್(ಮರಣೋತ್ತರ), ​ವಿಜ್ಞಾನಿ ಡಾ.ವಿ.ಕೆ.ಆತ್ರಿ ಮತ್ತು ಜಾನಪದ ಕಲಾವಿದ ಎಂ.ಮಹದೇವಸ್ವಾಮಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್  ಪ್ರದಾನ ಮಾಡಿದರು.
ಮೈಸೂರು ವಿವಿ ವಿದ್ಯಾರ್ಥಿಗಳಿಗೆ ಪುನೀತ್​, ಪಾರ್ವತಮ್ಮ ರಾಜ್​ಕುಮಾರ್​ ಹೆಸರಲ್ಲಿ 2 ಚಿನ್ನದ ಪದಕ: ಅಶ್ವಿನಿ ಘೋಷಣೆ
ಅಪ್ಪು ನೆನಪಲ್ಲಿ ಮತ್ತೆ ಒಳ್ಳೆಯ ಕೆಲಸ ಮಾಡಿದ ಕಾಲಿವುಡ್ ಸೂಪರ್ ಸ್ಟಾರ್ ವಿಶಾಲ್​
ಇದು JAMES ರಹಸ್ಯ: ನಿಮ್ಮ ಕಣ್ಣಲ್ಲಿ ನೀರು ತರಿಸುತ್ತೆ ಶೈನ್​ ಶೆಟ್ಟಿ ಬಿಚ್ಚಿಟ್ಟ ರೀಲ್​ ಮತ್ತು ರಿಯಾಲಿಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
