ಮೈಸೂರು:ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಮೊನ್ನೆ ನಡೆದಿರುವ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಮತ್ತೊಂದು ಆಘಾತಕಾರಿ ಮಾಹಿತಿ ಲಭ್ಯವಾಗಿದೆ.
ಉತ್ತರ ಭಾರತ ಮೂಲದ ಯುವತಿ ಮೈಸೂರು ನಗರದ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ಆ.24ರಂದು ಚಾಮುಂಡಿಬೆಟ್ಟದ ತಪ್ಪಲಿನ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್​​​​ನ ಗುಡ್ಡದ ಬಳಿ ಸ್ನೇಹಿತನೊಂದಿಗೆ ಇದ್ದಳು. ಇವರಿಬ್ಬರೂ ಖಾಸಗಿ ಕ್ಷಣಗಳನ್ನು ಕಳೆಯುತ್ತಿದ್ದಾಗ ಅಲ್ಲಿಗೆ ಬಂದ ಐವರು ಕಾಮುಕರ ತಂಡ ಆ ದೃಶ್ಯವನ್ನ ಮೊಬೈಲ್​ನಲ್ಲಿ ರೆಕಾರ್ಡ್​ ಮಾಡಿದ್ದಾರೆ. ನಂತರ ವಿಡಿಯೋ ತೋರಿಸಿ, 3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡಲು ಯುವತಿ ಮತ್ತು ಸ್ನೇಹಿತ ಒಪ್ಪಿಕೊಂಡಿದ್ದರಂತೆ.
ಮಧ್ಯರಾತ್ರಿಯಾದರೂ ಅಷ್ಟೊಂದು ಹಣ ಹೊಂದಿಸಲು ಅವರಿಬ್ಬರಿಗೂ ಸಾಧ್ಯವಾಗಿಲ್ಲ. ಆಗ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೆ, ಆಕೆಯ ಸ್ನೇಹಿತನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಕಾಮುಕರ ತಂಡ ಪರಾರಿಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಎಲ್ಲರೂ 20 ರಿಂದ 30 ವರ್ಷ ವಯಸ್ಸಿನ ಯುವಕರಾಗಿದ್ದು, ಕನ್ನಡದಲ್ಲೇ ಮಾತನಾಡುತ್ತಿದ್ದರು ಘಟನೆ ಬಗ್ಗೆ ಸಂತ್ರಸ್ತೆಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆರೋಪಿಗಳೆಲ್ಲರೂ ಕುಡಿದಿದ್ದರು ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಬಿಯರ್ ಬಾಟಲಿ ಪತ್ತೆಯಾಗಿದೆ. ಆ. 24ನೇ ತಾರೀಖಿನ ಸಂಜೆ ಆ ಸ್ಥಳದ ಸುತ್ತಮುತ್ತಲಿನಲ್ಲಿ ಮೊಬೈಲ್ ಟವರ್ ಲೊಕೇಷನ್ ಟ್ರೇಸಿಂಗ್ ಮೂಲಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಡಿಜಿಪಿ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಲಾಗಿದೆ.
ಬೆಳ್ಳಂಬೆಳಗ್ಗೆ ಪ್ರೇಯಸಿಯ ತಂದೆಯನ್ನೇ ಭೀಕರವಾಗಿ ಕೊಂದ ಪ್ರಿಯಕರ! ಆ ಒಂದು ಕಾರಣಕ್ಕೆ ಹೀಗಾ ಮಾಡೋದು?

ಪುಡಾರಿಗಳ ಅಡ್ಡೆಯಾದ ಚಾಮುಂಡಿ ಬೆಟ್ಟದ ತಪ್ಪಲು: ಗ್ಯಾಂಗ್​ರೇಪ್​ ಜಾಗದಲ್ಲಿ ಮದ್ಯದ ಬಾಟಲಿ, ಕಾಂಡೋಮ್ ಪತ್ತೆ

ಪರಪುರುಷನೊಂದಿಗೆ ಓಡಿಹೋದ ಪತ್ನಿ! ಸತ್ವ ಪರೀಕ್ಷೆ ನೆಪದಲ್ಲಿ ಅತ್ತೆ-ಮಾವನಿಗೆ ಮಾಡಬಾರದ್ದು ಮಾಡಿಬಿಟ್ಟ ಅಳಿಯ

ಯುವತಿ ಜತೆ ನನ್ನ ಗಂಡನಿಗಿದೆ ಅಕ್ರಮ ಸಂಬಂಧ! ಪತ್ನಿ ಮತ್ತು ಆಕೆ ನಡುವೆ ಜಾಲತಾಣದಲ್ಲೇ ನಡೀತು ವಾರ್​, ವಿಡಿಯೋ ವೈರಲ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five + seven =
Remember me
