ಮೈಸೂರು:ನಂಜನಗೂಡು ತಾಲೂಕು ಬಿಳುಗಲಿ ಗ್ರಾಮದಲ್ಲಿ ಜಮೀನಿಗೆ ಹೋಗಿದ್ದ ತಾಯಿ-ಮಗಳು ಶವವಾಗಿ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.
ಅಮ್ಮ-ಮಗಳ ಕಾಲುಗಳನ್ನ ಸೀರೆಯಿಂದ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಮೃತದೇಹಗಳು ನೀರಿನ ಹಳ್ಳದ ಬಳಿ ಪತ್ತೆಯಾಗಿದ್ದು, ಕೊಲೆ ಶಂಕೆ ಮೂಡಿದೆ. ಪುಟ್ಟರಂಗಮ್ಮ(52) ಮತ್ತು ಇವರ ಮಗಳು ಮಣಿ(32) ಮೃತ ದುರ್ದೈವಿಗಳು.
ಜೂ.14ರಂದು ಮನೆಯಲ್ಲಿ ಜಮೀನಿಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಅಮ್ಮ-ಮಗಳು ಇಬ್ಬರೂ ವಾಪಸ್​ ಮನೆಗೆ ಬಂದಿರಲಿಲ್ಲ. ಕುಟುಂಬಸ್ಥರು ಎಲ್ಲೆಡೆ ಹುಡುಕಾಡಿದ್ದರೂ ಪತ್ತೆಯಾಗಿರಲಿಲ್ಲ. ಜೂ.19ರಂದು ನೀರಿನ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದರು. ಅಮ್ಮ-ಮಗಳ ಕಾಲುಗಳನ್ನ ಸೀರೆಯಿಂದ ಕಟ್ಟಿದ ಸ್ಥಿತಿಯಲ್ಲಿ ಮೃತದೇಹಗಳು ಇದ್ದವು. ಅಂತ್ಯಸಂಸ್ಕಾರವೂ ನಡೆದಿದೆ. ಇದೀಗ ಈ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂಬ ಶಂಕೆ ಮೂಡಿದ್ದು, ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳುಗಲಿ ಗ್ರಾಮದ ಯೋಗೇಶ್ ಹಾಗೂ ರಂಗಸ್ವಾಮಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + seventeen =
Remember me
