ಹಾವೇರಿ:ಯುದ್ಧಪೀಡಿತ ಯೂಕ್ರೇನ್​ನಲ್ಲಿ ರಷ್ಯಾ ಸೇನಾ ಪಡೆಯ ಶೆಲ್​ ದಾಳಿಯಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ಎಂಬಿಬಿಎಸ್​ ವಿದ್ಯಾರ್ಥಿ ನವೀನ ಗ್ಯಾನಗೌಡರ ಅವರ ಮೃತದೇಹ ಹುಟ್ಟೂರಿಗೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ. ನವೀನ್​ರ ಅಂತಿಮ ದರ್ಶನ ಪಡೆಯುವ ಭಾರವಾದ ಮನಸ್ಸಿನಲ್ಲೇ ಸುತ್ತಮುತ್ತಲ ಗ್ರಾಮಸ್ಥರು ಆಗಮಿಸಿದ್ದು, ಹೆತ್ತವರ ಗೋಳಾಟ ನೋಡಿ ಕಂಬನಿ ಮಿಡಿಯುತ್ತಿದ್ದಾರೆ.
ಮಾ.2ರಂದು ಯೂಕ್ರೇನ್​ನಲ್ಲಿ ನವೀನ್​ ಮೃತಪಟ್ಟಿದ್ದರು. ಈ ಸುದ್ದಿ ತಿಳಿದಾಗಿನಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. 20 ದಿನಗಳ ಬಳಿಕ ಅಂದರೆ ಇಂದು(ಮಾ.21) ನವೀನ್​ ಮೃತದೇಹ ಕರ್ನಾಟಕಕ್ಕೆ ಬಂತು. ನಸುಕಿನ 3 ಗಂಟೆಯ ಹೊತ್ತಿಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪಾರ್ಥಿವ ಶರೀರವನ್ನು ಬರಮಾಡಿಕೊಂಡರು. ಸದ್ಯ ಸಿಎಂ ಹಾವೇರಿಗೆ ಪ್ರಯಾಣ ಬೆಳೆಸಿದ್ದು, ನವೀನ್​ ಸ್ವಗೃಹಕ್ಕೆ ಭೇಟಿ ನೀಡಿ ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ.
ಸ್ವಗೃಹ ಚಳಗೇರಿಯ ಮನೆ ಬಳಿ ನವೀನ್​ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಜನರಿಗೆ ವ್ಯವಸ್ಥೆ ಮಾಡಲಾಗಿದೆ. ಶಾಸಕ ಅರುಣ್​ ಕುಮಾರ್​ ಪೂಜಾರ್​ ಕೂಡ ನವೀನ್​ರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಯುದ್ಧಭೂಮಿಯಿಂದ ನವೀನ್‌ ದೇಹ ದುಬೈಗೆ ತಂದು, ಅಲ್ಲಿಂದ ಬೆಂಗಳೂರಿಗೆ ತಂದ ಕ್ಲಿಷ್ಟಕರ ಸನ್ನಿವೇಶ ಬಿಚ್ಚಿಟ್ಟ ಸಿಎಂ

ಎಚ್​ಡಿಕೆ ಬೆಂಗಾವಲು ವಾಹನ ಅಪಘಾತ: ಪಾವಗಡ ಬಸ್​ ದುರಂತದಲ್ಲಿ ಗಾಯಗೊಂಡವರ ಭೇಟಿ ವೇಳೆ ಮತ್ತೊಂದು ಅವಘಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 1 =
Remember me
