ಬೆಳಗಾವಿ:ಹನಿಟ್ರ್ಯಾಪ್​ ಪ್ರಕರಣದ ಪ್ರಮುಖ ಆರೋಪಿ ನವ್ಯಶ್ರೀ ರಾವ್​ ಬೆಳಗಾವಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾಳೆ. ರಾಜ್​ಕುಮಾರ್​ ಟಾಕಳೆ ನನ್ನ ಗಂಡ. ಅವನು ನನಗೆ ಏನ್​ ಮೋಸ ಮಾಡಿದ್ದಾನೆ ಅಂತ ನಾನು ಮುಂದಿನ ದಿನಗಳಲ್ಲಿ ಹೇಳ್ತೀನಿ ಎಂದು ನವ್ಯಶ್ರೀ ಉಲ್ಟಾ ಹೊಡೆದಿದ್ದಾಳೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕಾಂಗ್ರೆಸ್​ ಮುಖಂಡೆ ನವ್ಯಶ್ರೀ ರಾಮಚಂದ್ರರಾವ್​ ಮತ್ತು ಈಕೆಯ ಪ್ರಿಯಕರ ತಿಲಕ್​ ರಾಜ್​ ವಿರುದ್ಧ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಸೋಮವಾರ ತಡರಾತ್ರಿ ಎಫ್​ಐಆರ್​ ದಾಖಲಿಸಿದ್ದರು. ‘2020ರಲ್ಲಿ ಬೆಂಗಳೂರಲ್ಲಿ ನನಗೆ ನವ್ಯಶ್ರೀ ಪರಿಚಯವಾದರು. ಇಬ್ಬರ ನಡುವೆ ಸಲುಗೆ ಬೆಳೆದಿತ್ತು. ನನಗೆ ಮದ್ವೆ ಆಗಿ ಮೂವರು ಮಕ್ಕಳಿದ್ದಾರೆ ಎಂಬುಗೆ ಆಕೆಗೆ ಗೊತ್ತಿದ್ದರೂ ಪ್ರೀತಿ ಪ್ರೇಮ ಅಂದಳು. ನಮ್ಮಿಬ್ಬರ ನಡುವೆ ದೈಹಿಕ ಸಂಬಂಧವೂ ಬೆಳೆದಿತ್ತು. ನನ್ನೊಂದಿಗೆ ಚೆನ್ನಾಗಿಯೇ ಇದ್ದಳು. ಇದ್ದಕ್ಕಿದ್ದಂತೆ ಖಾಸಗಿ ಕ್ಷಣದ ವಿಡಿಯೋ ಚಿತ್ರೀಕರಿಸಿಕೊಂಡು ನವ್ಯಶ್ರೀ ಮತ್ತು ಈಕೆಯ ಆಪ್ತ ತಿಲಕ್​ ಇಬ್ಬರೂ ನನ್ನ ಬಳಿ ಹಣಕ್ಕಾಗಿ ಡಿಮಾಂಡ್​ ಇಟ್ಟರು. 50 ಲಕ್ಷ ರೂ. ಕೊಡಬೇಕು. ಇಲ್ಲವಾದಲ್ಲಿ ವಿಡಿಯೋವನ್ನು ನಿನ್ನ ಹೆಂಡ್ತಿಗೆ ಕಳುಹಿಸುವೆ ಎಂದು ಬೆದರಿಕೆ ಹಾಕಿದ್ದಾರೆ. ಮಾನಸಿಕ ಚಿತ್ರಹಿಂಸೆ ನೀಡಿದ್ದಾರೆ. ಸುಳ್ಳು ಕೇಸ್​ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಹೇಳುತ್ತಿದ್ದಾರೆ. ದಯವಿಟ್ಟು ನನಗೆ ರಕ್ಷಣೆ ಕೊಡಿ’ ಎಂದು ದೂರಿನಲ್ಲಿ ವಿವರಿಸಿದ್ದರು.
ಈ ಸುದ್ದಿ ಪ್ರಸಾರ ಆಗುತ್ತಿದ್ದಂತೆದಿಗ್ವಿಜಯ ನ್ಯೂಸ್​ಜತೆ ಫೋನ್​ ಮೂಲಕ ಮಾತನಾಡಿದ ನವ್ಯಶ್ರೀ, ‘ದಯವಿಟ್ಟು ನನಗೆ ಒಂದು ದಿನ ಕಾಲಾವಕಾಶ ಕೊಡಿ. ನಾನು 15 ದಿನದಿಂದ ಇಂಡಿಯಾದಲ್ಲಿ ಇರಲೇ ಇಲ್ಲ. ನಿನ್ನೆ ಮಾರ್ನಿಂಗ್​​ ಭಾರತಕ್ಕೆ ವಾಪಸ್​ ಬಂದೆ. ಇಲ್ಲಿ ಏನೇನಾಗಿದೆ ಎಂದು ನಾನು ತಿಳಿದುಕೊಂಡು ಉತ್ತರಿಸುವೆ. ನನ್ನ ಕೈಯಲ್ಲಿ ಸಾಧ್ಯವಾದಷ್ಟು ಸಮಾಜಸೇವೆ ಮಾಡಿದ್ದೇನೆ. ಹನಿಟ್ರ್ಯಾಪ್​ ಮಾಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾಗಿದೆ. ನನಗೆ ನನ್ನ ತಂದೆ-ತಾಯಿ ಒಳ್ಳೇ ಸಂಸ್ಕಾರ ಹೇಳಿಕೊಟ್ಟಿದ್ದಾರೆ. ನನಗೆ 2 ವರ್ಷದ ಹಿಂದೆ ಈ ಹಿಂದಿನ ಸರ್ಕಾರದಲ್ಲಿ ಸಚಿವರೊಬ್ಬರ ಆಪ್ತನಾಗಿದ್ದ ರಾಜಕುಮಾರ್​ ಟಾಕಳೆ ಅವರ ಪರಿಚಯ ಆಗಿತ್ತು’ ಎಂದಷ್ಟೇ ಉಳಿದ ಪ್ರಶ್ನೆಗೆ ಉತ್ತರಿಸದೆ ಕರೆ ಸ್ಥಗಿತ ಮಾಡಿದ್ದರು. ಇದಾದ ಬೆನ್ನಲ್ಲೇ ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ನವ್ಯಶ್ರೀ, ‘ರಾಜ​ಕುಮಾರ್​ ಟಾಕಳೆ ನನ್ನ ಗಂಡ’ ಎನ್ನುವ ಮೂಲಕ ಈ ಪಕ್ರರಣಕ್ಕೆ ಟ್ವಿಸ್ಟ್​ ಕೊಟ್ಟಿದ್ದಾಳೆ.
ಹನಿಟ್ರ್ಯಾಪ್​ ಕೇಸಲ್ಲಿ ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ: ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದ ಈಕೆ ಹಿನ್ನೆಲೆ ಇಲ್ಲಿದೆ

ಕಾಂಗ್ರೆಸ್​ ನಾಯಕಿ ವಿರುದ್ಧ ಬೆಳಗಾವಿಯಲ್ಲಿ FIR ದಾಖಲು! ಖಾಸಗಿ ವಿಡಿಯೋ ತೋರಿಸಿ ಆಕೆ ಕೊಟ್ಟ ಚಿತ್ರಹಿಂಸೆ ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 9 =
Remember me
