ಬೆಂಗಳೂರು: ರಾಜ್ಯ ಕಾಂಗ್ರೆಸ್​ಗೆ ಸಾರಥಿ ಆರಿಸುವ ವಿಚಾರದಲ್ಲಿ ಒಮ್ಮತ ಮೂಡದಿರುವ ಹಿನ್ನೆಲೆ ಮುಂದಿನ ಎರಡೂವರೆ ವರ್ಷದ ಅವಧಿಗೆ ಎರಡೂ ಬಣ ಒಪ್ಪಿಕೊಳ್ಳುವಂಥ ವ್ಯಕ್ತಿಗೆ ಜವಾಬ್ದಾರಿ ನೀಡುವ ಬಗ್ಗೆ ಎಐಸಿಸಿ ಹಂತದಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಬಣದಿಂದ ಎಂ.ಟಿ.ಪಾಟೀಲ್ ಹಾಗೂ ಹಿರಿಯರ ಬಣದಿಂದ ಡಿ.ಕೆ.ಶಿವಕುಮಾರ್ ಹೆಸರು ಅಂತಿಮವಾಗಿ ಪ್ರಸ್ತಾಪವಾಗಿತ್ತು. ಇವರಿಬ್ಬರಲ್ಲಿ ಒಬ್ಬರನ್ನು ಒಮ್ಮತದಿಂದ ಆಯ್ಕೆ ಮಾಡಲು ಸಾಧ್ಯವಿಲ್ಲ ಎಂದು ದೆಹಲಿಯಿಂದ ಆಗಮಿಸಿದ್ದ ಎಐಸಿಸಿ ಪ್ರತಿನಿಧಿಗಳು ಹೈಕಮಾಂಡ್​ಗೆ ವಿವರಿಸಿದ್ದಾರೆನ್ನಲಾಗಿದೆ.
ಇಷ್ಟರ ನಡುವೆ ಡಿ.ಕೆ.ಶಿವಕುಮಾರ್ ಹೆಸರು ಬಹುತೇಕ ಅಂತಿಮಗೊಂಡಿದ್ದು, ಹೈಕಮಾಂಡ್ ಅಂತಿಮ ಮುದ್ರೆ ಒತ್ತುವುದಷ್ಟೇ ಬಾಕಿ ಎಂದು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿತ್ತು. ಇವರಿಬ್ಬರನ್ನು ಹೊರತುಪಡಿಸಿ, ಎಲ್ಲರನ್ನೂ ತೂಗಿಸಿಕೊಂಡು ಹೋಗುವ ವ್ಯಕ್ತಿಗೆ ಅವಕಾಶ ಕೊಟ್ಟರೆ ಹೇಗೆ? ಮುಂದಿನ ಸಾರ್ವತ್ರಿಕ ಚುನಾವಣೆಗೆ ಮುನ್ನ ಮತ್ತೆ ಬದಲಾವಣೆ, ಹೆಚ್ಚು ಪ್ರಭಾವ ಶಾಲಿಗಳಿಗೆ ಅವಕಾಶ ಕೊಟ್ಟರೆ ಹೇಗೆ? ಎಂಬ ಬಗ್ಗೆ ದೆಹಲಿ ಹಂತದಲ್ಲಿ ಪ್ರಮುಖ ನಾಯಕರು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಒಂದೊಮ್ಮೆ, ಡಿ.ಕೆ.ಶಿವಕುಮಾರ್ ಹೊರತುಪಡಿಸಿ ಬೇರೆಯವರಿಗೆ ಅವಕಾಶ ಕೊಡುವುದೇ ಸೂಕ್ತ ಎಂಬ ನಿರ್ಧಾರಕ್ಕೆ ಬಂದಲ್ಲಿ ಕೃಷ್ಣಬೈರೇಗೌಡ, ಈಶ್ವರ ಖಂಡ್ರೆ, ರಾಮಲಿಂಗಾ ರೆಡ್ಡಿ ಪೈಕಿ ಒಬ್ಬರಿಗೆ ಅವಕಾಶ ಕೊಡಬಹುದು ಎಂದು ಪಕ್ಷದ ನಾಯಕರು ಅಭಿಪ್ರಾಯಪಡುತ್ತಾರೆ.
ಯಾರನ್ನು ಆಯ್ಕೆ ಮಾಡಿದರೆ ಸೂಕ್ತ ಎಂಬ ಕುರಿತು ಡಾ. ಜಿ.ಪರಮೇಶ್ವರ್ ಹೈಕಮಾಂಡ್​ಗೆ ವರದಿ ನೀಡಿದ್ದು, ಈ ವರದಿ ಆಧಾರದಲ್ಲಿ ಶೀಘ್ರವೇ ದೆಹಲಿಯಲ್ಲಿ ಹೈಕಮಾಂಡ್ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಪ್ರಮುಖ ಮುಖಂಡರ ಅಭಿಪ್ರಾಯವನ್ನು ಆಸಭೆಯಲ್ಲೊಮ್ಮೆ ಕೇಳಿ ಪಕ್ಷ ಅಂತಿಮ ತೀರ್ಮಾನ ಪ್ರಕಟಿಸಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + twelve =
Remember me
