ಹಾಸನ:ಅರಕಲಗೂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಗಂಡು ಶಿಶುವನ್ನ ದುಷ್ಕರ್ಮಿಗಳು ಭಾನುವಾರ ರಾತ್ರಿ ಅಪಹರಣ ಮಾಡಿದ್ದಾರೆ.
ಅಸ್ಸಾಂ ಮೂಲದ ಕೂಲಿ ಕಾರ್ಮಿಕ ಮಹಿಳೆ ಮಗು ಕಳೆದುಕೊಂಡವರು. ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಭಾನುವಾರ ಸಂಜೆ 7 ಗಂಟೆಗೆ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ಸಮಯದ ಬಳಿಕೆ ಹೆರಿಗೆ ಆಗಿತ್ತು. ಆ ವೇಳೆ ಮಗು ಅಪಹರಿಸಲು ಹೊಂಚು ಹಾಕಿದ್ದ ನಾಲ್ವರು ಕಿಡಿಗೇಡಿಗಳು ತಡರಾತ್ರಿ 12 ಗಂಟೆ ವೇಳೆಗೆ ಹೆರಿಗೆ ವಾರ್ಡ್​ಗೆ ತೆರಳಿ ಹಸುಗೂಸನ್ನು ಹೊತ್ತೊಯ್ದಿದ್ದಾರೆ. ಮಗು ಅಪಹರಿಸಲು ಬಂದ ನಾಲ್ವರು ಕಳ್ಳರಲ್ಲಿ ಒಬ್ಬರು ನರ್ಸ್ ವೇಶಧಾರಿಯಾಗಿದ್ದ ಬಂದಿದ್ದರು.
ಆಸ್ಪತ್ರೆ ಹಿಂಭಾಗದ ಬಾಗಿಲಿನಿಂದ ಮಗು ಅಪಹರಿಸಿ ಪರಾರಿಯಾಗಿದ್ದಾರೆ. ಆಸ್ಪತ್ರೆ ಸಿಸಿ ಟಿವಿ ಕ್ಯಾಮರಾದಲ್ಲಿ ಕಳ್ಳರ ಮುಖಚಹರೆ ಸೆರೆಯಾಗಿದೆ. ಅರಕಲಗೂಡು ನಗರ ಪೊಲೀಸ್ ಠಾಣೆಗೆ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ದೂರು ನೀಡಿದ್ದು, ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಹುಚ್ಚುನಾಯಿ ಕಡಿದು 2 ವರ್ಷದ ಮಗು ಸಾವು! ಸೊಸೆ ಮೇಲಿನ ಕೋಪಕ್ಕೆ ವಿಷಯ ಮುಚ್ಚಿಟ್ಟರಾ ಅಜ್ಜಿ?

ವಿಚ್ಛೇದನ ಕೇಳಿದ್ದ ಅಪ್ಪ-ಅಮ್ಮನನ್ನು ಜಡ್ಜ್​ ಎದುರೇ ಒಂದುಗೂಡಿಸಿದ ಮಗ! ಶಿವಮೊಗ್ಗದಲ್ಲಿ ಮನಮಿಡಿಯುವ ಘಟನೆ

ಬ್ಲೂಟೂತ್ ಬಳಸೋ ಜನರೇ ಎಚ್ಚರ! ​ನಿಮ್ಗೂ ಬರಬಹುದು ಆಪತ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + four =
Remember me
