ನಾಗಮಂಗಲ:ಇವರಿಬ್ಬರೂ ದಾಂಪತ್ಯಕ್ಕೆ ಕಾಲಿಟ್ಟು 11 ತಿಂಗಳಾಗಿತ್ತು. ನೂರಾರು ಕನಸಿನ ಬುತ್ತಿಯೊಂದಿಗೆ ಖುಷಿಯಾಗಿದ್ದವರ ಬಾಳಲ್ಲಿ ವಿಧಿಯಾಟವೇ ಬೇರೆ ಇತ್ತು. ಇಬ್ಬರೂ ಪ್ರತ್ಯೇಕ ಘಟನೆಯಲ್ಲಿ ಒಂದೇ ದಿನ ದುರಂತ ಅಂತ್ಯ ಕಂಡಿದ್ದಾರೆ. ಗಂಡನ ಅಂತ್ಯಸಂಸ್ಕಾರ ನೆರವೇರಿಸಿ ಮನೆಗೆ ಬಂದ ಪತ್ನಿಯೂ ಸಾವಿನ ಮನೆಯ ಕದ ತಟ್ಟಿದ ಕರುಣಾಜನಕ ಘಟನೆ ಮಂಡ್ಯ ಜಿಲ್ಲೆಯಲ್ಲಿ ಶನಿವಾರ(ಇಂದು) ಸಂಭವಿಸಿದೆ.
ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಬೊಮ್ಮೇನಹಳ್ಳಿಯ ಕಿರಣ್ ಮತ್ತು ಇವರ ಪತ್ನಿ ಪೂಜಾ ಮೃತ ದುರ್ದೈವಿಗಳು. 11 ತಿಂಗಳ ಹಿಂದೆ ಮದುವೆ ಮಾಡಿಕೊಂಡಿದ್ದ ಈ ಜೋಡಿ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ವಾಸವಿತ್ತು.ಇದನ್ನೂ ಓದಿರಿಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!
ಕಿರಣ್​ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಇಂದು(ಶುಕ್ರವಾರ) ಬೆಳಗ್ಗೆ ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕಿರಣ್​ರ ಸ್ವಗ್ರಾಮ ನಾಗಮಂಗಲ ತಾಲೂಕು ಬಿಂಡಿಗನವಿಲೆ ಹೋಬಳಿಯ ಬೊಮ್ಮೇನಹಳ್ಳಿಗೆ ತರತಾಗಿತ್ತು. ಗಂಡನ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಪತ್ನಿ ಪೂಜಾ, ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ-ಸೊಸೆ ಇಬ್ಬರನ್ನೂ ಒಂದೇ ದಿನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಹೃದಯವಿದ್ರಾವಕ ಘಟನೆಗೆ ಇಡೀ ಗ್ರಾಮವೇ ಮಮ್ಮಲ ಮರುಗಿದೆ.
ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಪ್ರೀತಿಸಿದ್ದಕ್ಕೆ ದಲಿತ ಯುವಕನಿಗೆ ಚಪ್ಪಲಿ ಹಾರ ಹಾಕಿ ತಲೆ ಬೋಳಿಸಿ ಮೆರವಣಿಗೆ!

ಬೇಡ ಅಂದ್ರೂ ಸೆಕ್ಸ್​ ಮಾಡಿದ, ಹೊಟ್ಟೆಯಲ್ಲಿ ಬೆಳೆಯುತ್ತಿದ್ದ ಮಗುವನ್ನೂ ಕೊಂದ… ಕೊನೆಗೆ ಯುವತಿ ಕೊಟ್ಲು ಬಿಗ್​ ಶಾಕ್​!

ಕೋವಿಡ್​ಗೆ ಗಂಡ ಬಲಿ, 4 ದಿನದ ಬಳಿಕ ಮನೆಯಲ್ಲೇ ದುರಂತ ಅಂತ್ಯ ಕಂಡ ಗರ್ಭಿಣಿ ಪತ್ನಿ!

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 + 3 =
Remember me
