ಬೆಳಗಾವಿ:ಇವರಿಬ್ಬರು ಒಂದಲ್ಲ, ಎರಡಲ್ಲ ಬರೋಬ್ಬರಿ ಐದು ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಒಬ್ಬರನ್ನೊಬ್ಬರು ಬಿಟ್ಟಿ ಬದುಕಲಾರದಷ್ಟು ಹತ್ತಿರವಾಗಿದ್ದರು. ಆದರೂ ಒಂದು ತಿಂಗಳ ಹಿಂದಷ್ಟೇ ಯುವತಿಯನ್ನ ಕುಟುಂಬಸ್ಥರು ಬೇರೊಬ್ಬನೊಂದಿಗೆ ಮದುವೆ ಮಾಡಿಬಿಟ್ಟರು. ಇದೀಗ ಗಂಡನ ಮನೆಯಲ್ಲಿರಬೇಕಿದ್ದ ನವವಿವಾಹಿತೆ, ಪ್ರಿಯಕರನೊಟ್ಟಿಗೆ ದುರಂತ ಅಂತ್ಯಕಂಡಿದ್ದಾಳೆ.
ಇಂತಹ ದುರಂತ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿಂಧೋಗಿಯಲ್ಲಿ ನಡೆದಿದೆ. ಪಂಚಪ್ಪ ಕಣವಿ(25) ಮತ್ತು ಸಕ್ಕುಬಾಯಿ ಕರಿಗಾರ(23) ಮೃತ ಪ್ರೇಮಿಗಳು.ಇದನ್ನೂ ಓದಿರಿಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?
ಪಂಚಪ್ಪ ಮತ್ತು ಸಕ್ಕುಬಾಯಿ 5 ವರ್ಷದಿಂದ ಪ್ರೀತಿಸುತ್ತಿದ್ದರು. ಆದರೂ ಮತ್ತೊಬ್ಬನೊಂದಿಗೆ ಕುಟುಂಬಸ್ಥರು ಸಕ್ಕುಬಾಯಿಗೆ ಒಂದು ತಿಂಗಳ ಹಿಂದೆ ಮದುವೆ ಮಾಡಿದ್ದರು. ಸಕ್ಕುಬಾಯಿ ಮಾತ್ರ ಗಂಡನ ಮನೆಗೆ ಹೋಗದೆ ತವರಿನಲ್ಲೇ ಇದ್ದಳು. ಈ ವೇಳೆ ಪ್ರೇಮಿಗಳು ಕದ್ದುಮುಚ್ಚಿ ಭೇಟಿಯಾಗುತ್ತಿದ್ದರು.
ಗಂಡನ ಮನೆಗೆ ಹೋದರೆ ನಾವಿಬ್ಬರೂ ಬೇರೆ ಆಗ್ತೀವಿ ಎಂದು ಮನನೊಂದ ಪ್ರೇಮಿಗಳಿಬ್ಬರೂ ಗ್ರಾಮ ಹೊರವಲಯದ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ವಿದೇಶದಿಂದ ಬೀದರ್​ಗೆ ಬಂದ ಮಗನೂ ದುರಂತ ಅಂತ್ಯ!

ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − one =
Remember me
