ಮಂಗಳೂರು:ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ.
ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜತೆ ವಾಸವಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ.‌ ಎನ್ಐಎ ಜತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ.‌ ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಪುತ್ರಿಯೊಬ್ಬಳು ಕೇರಳದಲ್ಲಿ ನಾಪತ್ತೆಯಾಗಿದ್ದು, ಐಸಿಸ್ ಸಂಘಟನೆ ಸೇರಿದ್ದಾಗಿ ಹೇಳಲಾಗಿತ್ತು.
ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್​ಗಳನ್ನು ಸಬ್​ಸ್ಕ್ರೈಬ್ ಮಾಡಿ, ಮೃದುಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.
2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ಬೆಳ್ಳಂಬೆಳಗ್ಗೆ 62 ಮನೆಗಳ ಮೇಲೆ ದಾಳಿ: ಸುಖ ನಿದ್ದೆಯಲ್ಲಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
