ಮಂಗಳೂರು:ಬಿಹಾರದ ಪುಲ್ವಾರಿ ಷರೀಫ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು, ಗುರುವಾರ ಬೆಳ್ಳಂಬೆಳಗ್ಗೆ ದ‌ಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಎಸ್‌ಡಿಪಿಐ-ಪಿಎಫ್ಐ ಮುಖಂಡ ರಿಯಾಜ್ ಫರಂಗಿಪೇಟೆ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬಂಟ್ವಾಳದ ಬಿಸಿ ರೋಡ್​ನಲ್ಲಿರುವ ರಿಯಾಜ್ ಪರಂಗಿಪೇಟೆಯ ಮನೆ ಮೇಲೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ರಿಯಾಜ್​ರ ಮೊಬೈಲ್ ಅನ್ನು ವಶಕ್ಕೆ ಪಡೆದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ರಿಯಾಜ್​ರನ್ನ ವಿಚಾರಣೆ ಮಾಡುತ್ತಿದ್ದಾರೆ.
ಕಳೆದ ಜು.15 ರಂದು ಬಿಹಾರದಲ್ಲಿ ಅಖ್ತರ್ ಫರ್ವೇಜ್ ಮತ್ತು ಮಹಮದ್ ಜಲಾಲುದ್ದೀನ್ ಎಂಬ ಇಬ್ಬರನ್ನು ಬಿಹಾರ ಎಟಿಎಸ್​ನಿಂದ ಬಂಧಿಸಲಾಗಿದೆ. ಇವರಿಬ್ಬರ ಜತೆ ರಿಯಾಜ್ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಮೇರೆಗೆ ಎನ್​ಐಎ ದಾಳಿ ಮಾಡಿದೆ.
ರಿಯಾಜ್ ಪರಂಗಿಪೇಟೆಯ ಮನೆ ಮೇಲೆ ಎನ್‌ಐಎ ದಾಳಿ ಮಾಡಿದ್ದನ್ನು ಖಂಡಿಸಿ ಎಸ್‌ಡಿಪಿಐ-ಪಿಎಫ್ಐ ಕಾರ್ಯಕರ್ತರು ‘ಎನ್ಐಎ ಗೋ ಬ್ಯಾಕ್’ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಬಂಟ್ವಾಳ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಯುವತಿ ಜತೆ ಮೈಸೂರಿನ ಲಾಡ್ಜ್​ನಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ!

ಪ್ರತಿದಿನ ರಾತ್ರಿ ತಡವಾಗಿ ಮನೆಗೆ ಬರ್ತಿದ್ದ ಗಂಡ… ಇದೇ ವಿಚಾರಕ್ಕೆ ನಡೀತು ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
