ಬೆಂಗಳೂರು:ರಾತ್ರಿ 9 ಗಂಟೆಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಬೇಕು. ಬಳಿಕ ತಮ್ಮ ಮನೆಗಳಿಗೆ ತೆರಳಬೇಕು. ಯಾರು ಕೂಡ ಅನಾವಶ್ಯಕವಾಗಿ ಓಡಾಟ ನಡೆಸುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಕರೊನಾ ಸೋಂಕು ಹರಡುವಿಕೆ ನಿಯಂತ್ರಣ ನಿಟ್ಟಿನಲ್ಲಿ ಇಂದಿನಿಂದ ನಗರದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಪಂತ್, ಯಾರಾದರೂ ಅನಗತ್ಯವಾಗಿ ಓಡಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ. ಯಾರೊಬ್ಬರೂ ಬೇಕಾಬಿಟ್ಟಿಯಾಗಿ ಓಡಾಡಬಾರದು. ನಮ್ಮ ಪೊಲೀಸರು ಬಂದೋಬಸ್ತ್‌ಗೆ ಸಿದ್ಧರಾಗಿದ್ದಾರೆ. ನಗರದ ಎಲ್ಲ ಫ್ಲೈ ಓವರ್‌ಗಳನ್ನ ಮುಚ್ಚಾಲಾಗುತ್ತದೆ ಎಂದರು.ಇದನ್ನೂ ಓದಿರಿದೇವರ ಪೂಜೆ ಮಾಡಿದ್ರೆ ಕರೊನಾ ನಿಯಂತ್ರಣಕ್ಕೆ ಬರುತ್ತಾ? ಕಥೆ ಹೇಳಿದ ರೋಹಿಣಿ ಸಿಂಧೂರಿ
ತುರ್ತು ಸೇವೆ, ಹಾಲು, ಪೇಪರ್ ವಾಹನಗಳಿಗೆ ಯಾವುದೇ ಸಮಸ್ಯೆಯಿಲ್ಲ. ಎಂದಿನಂತೆ ಸಂಚರಿಸಲು ಅನುಮತಿ ನೀಡಲಾಗಿದೆ. ಯಾವುದೇ ರೀತಿಯ ಪಾಸ್​ಗಳನ್ನ ವಿತರಣೆ ಮಾಡುತ್ತಿಲ್ಲ ಎಂದು ಕಮಲ್ ಪಂತ್ ವಿವರಿಸಿದರು.
ಬೆಂಗಳೂರಿನ ಫ್ಲೈಓವರ್​ಗಳನ್ನು ರಾತ್ರಿ 9:50ಕ್ಕೆ ಸಂಚಾರಿ ಪೊಲೀಸ್ ಸಿಬ್ಬಂದಿ ಬಂದ್ ಮಾಡಲಿದ್ದಾರೆ. ರಿಯಾಯಿತಿ ಇರುವ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿದೆ. ದ್ವಿಮುಖ ರಸ್ತೆಯಲ್ಲಿ ಒಂದು ಮಾರ್ಗವನ್ನ ಬಂದ್ ಮಾಡಲಾಗುವುದು. ಒಂದು ರಸ್ತೆಯಲ್ಲಿ ಮಾತ್ರ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತೆ. ವಿಡಿಯೋ ವಾಲ್ ಕೆಲಸ ಮಾಡುತ್ತಿರುತ್ತೆ ಎಂದರು.
ಪೊಲೀಸರ ಕಣ್ತಪ್ಪಿಸಿ ರಾತ್ರಿ ವಾಹನ ಸಂಚಾರ ಮಾಡುವರ ಮೇಲೆ ಕಣ್ಣಿಡಲಾಗುತ್ತದೆ. ನಿಯಮ ಉಲ್ಲಂಘಿಸಿದರೆ ಸಿಸಿ ಕ್ಯಾಮರಾ ಪರಿಶೀಲಿಸಿ ಅಂತಹ ವಾಹನಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದರು.
ರಮೇಶ್ ಜಾರಕಿಹೊಳಿ ಅಪಾರ್ಟ್​ಮೆಂಟ್​ನಲ್ಲಿದೆ ಸೀಕ್ರೆಟ್​ ಡೋರ್​! ಸ್ಫೋಟಕ ರಹಸ್ಯ ಬಯಲು

ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಕೋಡಿಹಳ್ಳಿ ಚಂದ್ರಶೇಖರ್​ಗೆ ಗಡಿಪಾರು!

ಪ್ರೇಮಿಗಳ ಮಧ್ಯೆ ಹುಳಿ ಹಿಂಡಿದ್ಲಾ ಆಕೆ? ಆತ್ಮಹತ್ಯೆ ಯತ್ನಕ್ಕೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಚೈತ್ರಾ ಕೋಟೂರ್​

ಪಾರ್ಟಿಗೆ ಹೋಗ್ಬೇಕು ಚಪಾತಿ ಮಾಡಮ್ಮ ಎಂದ ಮಗ ಶವವಾಗಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − five =
Remember me
