ಬೆಂಗಳೂರು:ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದಲ್ಲಿ ಕರ್ನಾಟದಲ್ಲಿ ನಡೆಯುತ್ತಿರುವ ಭಾರತ್​ ಜೋಡೋ ಯಾತ್ರೆಗೆ ಅ.17ರಂದು ವಿರಾಮ ಇರಲಿದೆ. ಅಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಆ ದಿನ ಯಾತ್ರೆ ನಡೆಯುವುದಿಲ್ಲ. ಮರುದಿನ ಯಾತ್ರೆ ಮುಂದುವರಿಯಲಿದೆ.
ಯಾತ್ರೆಯಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ ಸೇರಿದಂತೆ ಪ್ರದೇಶ ಕಾಂಗ್ರೆಸ್ ಕಮಿಟಿಯ ಸುಮಾರು 40 ಪದಾಧಿಕಾರಿಗಳಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಅವರಿರುವ ಕ್ಯಾಂಪ್​ ಸ್ಥಳದಲ್ಲೇ ಪೋಲಿಂಗ್ ಬೂತ್ ಸ್ಥಾಪಿಸಲಾಗುತ್ತೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಸೆ.22ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅ.18ರಂದು ಮತದಾನ ನಡೆಯಲಿದ್ದು, ಅ.19ರಂದು ಫಲಿತಾಂಶ ಪ್ರಕಟವಾಗಲಿದೆ.
2022ರ ಸೆಪ್ಟೆಂಬರ್​ 7ರಂದು ಕನ್ಯಾಕುಮಾರಿಯಿಂದ ಶುರುವಾಗಿರುವ ರಾಹುಲ್​ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆ, ಸೆ.30ರಂದು ತಮಿಳುನಾಡಿನಿಂದ ಗುಂಡ್ಲುಪೇಟೆ ಮೂಲಕ ಕರ್ನಾಟಕವನ್ನು ಪ್ರವೇಶಿಸಿದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಯಶಸ್ವಿಯಾಗಿ ಯಾತ್ರೆ ನಡೆಸಿರುವ ರಾಹುಲ್, ಇಂದು(ಅ.8) ತುಮಕೂರು ಜಿಲ್ಲೆ ಪ್ರವೇಶಿಸಿದ್ದಾರೆ. ಈ ಯಾತ್ರೆ ಕಾಶ್ಮೀರದಲ್ಲಿ ಕೊನೆಯಾಗಲಿದೆ.
ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ತುಮಕೂರಲ್ಲಿ ಡಿಕೆಶಿ-ಸಿದ್ದು ಎದುರಲ್ಲೇ ಗೊಂದಲಕ್ಕೆ ತೆರೆ ಎಳೆದ ರಾಹುಲ್​ ಗಾಂಧಿ

ರಾಜ್ಯ ಸರ್ಕಾರ ಮತ್ತು ಬಿಜೆಪಿಗೆ ಧನ್ಯವಾದ ಸಲ್ಲಿಸಿದ ಪ್ರವೀಣ್​ ನೆಟ್ಟಾರು ಪತ್ನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
