ವಿಜಯಪುರ:ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಕಾಮುಕನಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಜಿಲ್ಲಾ ಹಾಗೂ ಸತ್ರ (ವಿಶೇಷ) ಪೋಕ್ಸೊ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ತಿಡಗುಂದಿ ಗ್ರಾಮದ ಯಲ್ಲಪ್ಪ ಶಿವಪ್ಪ ಬಳ್ಳೂರ ಶಿಕ್ಷೆಗೆ ಗುರಿಯಾದವ. 2015ರಲ್ಲಿ ಇಂಡಿ ತಾಲೂಕಿನ ಅಹಿರಸಂಗ ಗ್ರಾಮದಲ್ಲಿ ಕಬ್ಬು ಕಟಾವು ಕೆಲಸಕ್ಕೆ ಹೋಗಿ ಅಲ್ಲೇ ಟೆಂಟ್ ಹಾಕಿಕೊಂಡು ವಾಸವಾಗಿದ್ದ ಕುಟುಂಬವೊಂದರ 11 ವರ್ಷದ ಬಾಲಕಿಯನ್ನು ಯಲ್ಲಪ್ಪ ಪುಸಲಾಯಿಸಿ ಕರೆದುಕೊಂಡು ಹೋಗಿದ್ದ. ಸೋಲ್ಲಾಪುರ, ಕರಾಡ ಹಾಗೂ ತಿಡಗುಂದಿ ಊರುಗಳಿಗೆ ಕರೆದೊಯ್ದು, ಆ ಸ್ಥಳಗಳಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಇಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಎನ್​. ಸವಿತಾ ಕುಮಾರಿ ಅವರು ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ವಿ.ಜಿ. ಹಗರಗುಂಡ ವಾದ ಮಂಡಿಸಿದ್ದರು.
ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಗಂಡನ ಮೊಬೈಲ್​ ಚೆಕ್​ ಮಾಡಿ ಪ್ರೈವಸಿಗೆ ಧಕ್ಕೆ ತಂದ ಪತ್ನಿಗೆ 1 ಲಕ್ಷ ರೂಪಾಯಿ ದಂಡ!

ರಾಜ್ಯದಲ್ಲಿ ಶುದ್ಧ ಬಿಜೆಪಿ ಸರ್ಕಾರವಿಲ್ಲ, ನನ್ನ ಅಧಿಕಾರದಲ್ಲಿ ಬೇರೆಯವ್ರು ಮೂಗು ತೂರಿಸಿದ್ರೆ ಸಹಿಸಲ್ಲ: ಯೋಗೇಶ್ವರ್​ ಸ್ಫೋಟಕ ಹೇಳಿಕೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seven + 11 =
Remember me
