ಬೆಂಗಳೂರು:ಮುಂದಿನ ಒಂದು ತಿಂಗಳೊಳಗೆ ಹೊಸದಾಗಿ ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವ ನೀಡುವ ಯೋಜನೆ ಆರಂಭಿಸಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಬಾಲಕೃಷ್ಣ ಹೇಳಿದರು.
ಸಂಘದಲ್ಲಿ ಸದ್ಯ 5 ಲಕ್ಷ ಸದಸ್ಯರಿದ್ದಾರೆ. ಸದಸ್ಯತ್ವ ನೀಡುವಂತೆ ಒತ್ತಡ ಇರುವುದರಿಂದ ಹಾಗೂ ಸದಸ್ಯತ್ವ ಹೊಂದಿಲ್ಲದವರಿಗೆ ಅವಕಾಶ ಕಲ್ಪಿಸಬೇಕೆಂಬ ಮನವಿ ಬಂದಿದೆ. 1,600 ರೂ.ಶುಲ್ಕ ಭರಿಸಿ ಸದಸ್ಯತ್ವ ಪಡೆಯಬಹುದು. ಸದ್ಯದಲ್ಲೇ ದಿನಾಂಕ ನಿಗದಿಪಡಿಸಲಾಗುವುದು. ಸಂಘದ ಬಹು ದಿನದ ಕನಸಾಗಿದ್ದ ಕೆಂಪೇಗೌಡ ವಿಶ್ವವಿದ್ಯಾಲಯ ರಚನೆಗೆ ಈಗಾಗಲೇ ಪ್ರಕ್ರಿಯೆಗಳು ನಡೆಯುತ್ತಿದ್ದು, ಸದ್ಯದಲ್ಲೇ ಸಂಘದಿಂದ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದೇವೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸಂಘದಲ್ಲಿ ಕಾರ್ಯನಿರ್ವಹಿಸುತ್ತಿರುವ 1,363 ನೌಕರರಿಗೆ ಆರನೇ ವೇತನ ಶ್ರೇಣಿಯನ್ನು ಜು.1ರಿಂದ ಜಾರಿಗೊಳಿಸಲಾಗುವುದು. ಕ್ರೋಡೀಕೃತ ವೇತನದಲ್ಲಿ ಕಾರ್ಯನಿರ್ವಹಿಸುತ್ತಿರುವ 400ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕಾಯಂಗೊಳಿಸಲಾಗಿದೆ. ಸಂಘದಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಕೆಂಪೇಗೌಡ ಆಸ್ಪತ್ರೆ ಆಧುನೀಕರಣಕ್ಕೆ ಯೋಜನೆ ರೂಪಿಸಿದ್ದು, ಇದಕ್ಕಾಗಿ 20 ಕೋಟಿ ರೂ. ನೀಡಲಾಗುತ್ತಿದೆ. ಬೆಂಗಳೂರು, ಮೈಸೂರು, ತುಮಕೂರು ಮತ್ತು ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಲಯಗಳಿವೆ. ಹೆಣ್ಣು ಮಕ್ಕಳ ಅನುಕೂಲಕ್ಕಾಗಿ ಹಾಸನ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಲ್ಲಿ ನೂತನ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುತ್ತಿದೆ. ಸಂಘದ ಆಸ್ತಿಯ ರಕ್ಷಣೆಗಾಗಿ ದಾಖಲೆಗಳನ್ನು ಕಂಪ್ಯೂಟರೀಕರಣ ಮಾಡಲಾಗಿದೆ ಎಂದು ಬಾಲಕೃಷ್ಣ ತಿಳಿಸಿದ್ದಾರೆ.
ಸಮಾವೇಶ ಆಯೋಜನೆ:ಸಮುದಾಯದ ಜನರನ್ನು ಒಗ್ಗೂಡಿಸಿ ಶೀಘ್ರದಲ್ಲೇ ರಾಜ್ಯಮಟ್ಟದ ಸಮಾವೇಶ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಸಂಘ ಹಾಗೂ ಸಮುದಾಯದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು. ರಾಜ್ಯ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ತ್ವರಿತಗತಿಯಲ್ಲಿ ಕಾರ್ಯಾರಂಭವಾಗಬೇಕು. ಬೆಂಗಳೂರಿನ ಯಾವುದಾದರೂ ಒಂದು ವಿಶ್ವವಿದ್ಯಾಲಯಕ್ಕೆ ಕೆಂಪೇಗೌಡ ಹೆಸರು ಇಡಬೇಕು ಎಂದು ಬಾಲಕೃಷ್ಣ ಹೇಳಿದರು. ಸಮುದಾಯದ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‌ನ ಶುಲ್ಕದಲ್ಲಿ ಹಾಗೂ ಆಸ್ಪತ್ರೆಯ ಚಿಕಿತ್ಸಾ ವೆಚ್ಚದಲ್ಲಿ ವಿನಾಯಿತಿ ಇರಲಿದೆ. 2020-21ನೇ ಸಾಲಿನಲ್ಲಿ ಒಕ್ಕಲಿಗರ ಸಂಘದ ಶಿಕ್ಷಣ ಸಂಸ್ಥೆಗಳಲ್ಲಿ 231 ವಿದ್ಯಾರ್ಥಿಗಳು ರ್ಯಾಂಕ್​ ಪಡೆದಿದ್ದಾರೆ ಎಂದರು.
ಮೈಸೂರಲ್ಲಿ ವಿಕೃತ ಕಾಮಿ: ಈತನ ಗಾಳಕ್ಕೆ ಬಿದ್ದ ಯುವತಿಯರ ಪಾಡು ಹೇಳತೀರದು… ಮೊಬೈಲ್​ ನೋಡಿ ಬೆಚ್ಚಿಬಿದ್ದ ಪೊಲೀಸರು

BJP ಮುಖಂಡನ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್​: ಪ್ಲೀಸ್​ ಅನಂತುಗೆ ಏನೂ ಮಾಡ್ಬೇಡಿ ಎಂದು ಆಕೆ ಕಣ್ಣೀರಿಟ್ಟರೂ ಪತ್ನಿ ಮನಸು ಕರಗಲಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + eighteen =
Remember me
