ಬೆಂಗಳೂರು:ಕರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದಲ್ಲಿ ಯಾರಾದರೂ ಮಹಾಮಾರಿ ಕರೊನಾಗೆ ಬಲಿಯಾದರೆ, ಅಂತಹವರ ಕುಟುಂಬಕ್ಕೆ ಸರ್ಕಾರ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಿದೆ. ಈ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಅವರ ಹೆಸರಿನಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಕೋವಿಡ್​ನಿಂದ ಸಾಕಷ್ಟು ಕುಟುಂಬಗಳಲ್ಲಿ ದುಡಿಯುವ ವ್ಯಕ್ತಿಗಳೇ ಮೃತಪಟ್ಟಿದ್ದಾರೆ. ಪರಿಣಾಮ ಆ ಕುಟುಂಬಸಂಕಷ್ಟಕ್ಕೆ ಸಿಲುಕಿದ್ದು, ಅವರ ನೆರವಿಗಾಗಿ ಪರಿಹಾರ ನೀಡಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ 25-30 ಸಾವಿರ ಕುಟುಂಬಕ್ಕೆ ಅನುಕೂಲ ಆಗಲಿದೆ ಎಂದರು.
ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಹಣಕಾಸು ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಇದಕ್ಕಾಗಿ ಸರ್ಕಾರಕ್ಕೆ 250-300 ಕೋಟಿ ರೂಪಾಯಿ ಬೇಕಾಗುತ್ತದೆ. ರಾಜ್ಯದಲ್ಲಿ ಆರ್ಥಿಕ ಸ್ಥಿತಿ ಉತ್ತಮ ಆಗಿರುವುದರಿಂದಲೇ ಪರಿಹಾರ ನೀಡಲು ಸಾಧ್ಯವಾಗುತ್ತಿದೆ.ದೇಶದಲ್ಲಿ ಮೊದಲ ಬಾರಿಗೆ ಈ ರೀತಿಯ ಪರಿಹಾರ ನೀಡುತ್ತಿರುವ ರಾಜ್ಯ ನಮ್ಮದು ಎಂದರು.
ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

ಬದುಕಿನ ಪಯಣ ಮುಗಿಸಿದ ಸಂಚಾರಿ ವಿಜಯ್, ಅಂಗಾಂಗ ದಾನಕ್ಕೆ ನಿರ್ಧಾರ

ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − seven =
Remember me
