ಬೆಂಗಳೂರು:ಚಾಮರಾಜನಗರ ಜಿಲ್ಲಾಸ್ಪತ್ರೆಯ ಕರೊನಾ ವಾರ್ಡ್​ನಲ್ಲಿ ರೋಗಿಗಳು ಮೃತಪಟ್ಟಿರುವುದು ಘೋರ ಅನ್ಯಾಯ, ಇದು ಕ್ಷಮೆಗೆ ಅರ್ಹವಲ್ಲದ ಘಟನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಳವಳ ವ್ಯಕ್ತಪಡಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಟಿ.ರವಿ, ಈ ಘಟನೆಗೆ ಸಚಿವರು ಅಥವಾ ಅಧಿಕಾರಿಗಳು ಹೊಣೆಯಾಗಿದ್ದರೆ ಅವರೇ ಹೊಣೆ ಹೊತ್ತುಕೊಳ್ಳಬೇಕು. ಒಂದು ವೇಳೆ ನಾನು ಸಚಿವನಾಗಿ ಇಂತಹ ಘಟನೆ ನನ್ನ ಗಮನಕ್ಕೆ ಬಂದು, ನಾನು ಕ್ರಮ ತೆಗೆದುಕೊಳ್ಳದಿದ್ದರೆ ನಾನೇ ಹೊಣೆ ಹೊತ್ತಿಕೊಳ್ಳುತ್ತಿದೆ. ಆಕ್ಸಿಜನ್ ಕೊರತೆಯಿಂದ ಈ ದುರಂತ ಸಂಭವಿಸಿದ್ದರೆ ಸರ್ಕಾರವೇ ಈ ಸಾವಿನ ಹೊಣೆ ಹೊತ್ತುಕೊಳ್ಳಬೇಕಾಗುತ್ತೆ ಎಂದರು.
ಬೇರೆ ರಾಜ್ಯಗಳಲ್ಲಿ ಇಂತಹ ಘಟನೆಗಳು ಸಂಭವಿಸಿವೆ. ಆಗಲೇ ನಾವು ಪಾಠ ಕಲಿಯಬೇಕಾಗಿತ್ತು. ಅದು ಆಗಿಲ್ಲ, ರಾಜೀನಾಮೆ ನೀಡುವುದರಿಂದ ಸಮಸ್ಯೆ ಬಗೆಹರಿದು, ಸತ್ತವರು ವಾಪಸ್ ಬರುತ್ತಾರೆ ಎನ್ನುವುದಾದರೆ ನಮಗೆ ಅಧಿಕಾರ ಮುಖ್ಯವಲ್ಲ. ಮಹಾರಾಷ್ಟ್ರ, ದೆಹಲಿಯಲ್ಲೂ ಇಂತಹ ಘಟನೆಗಳು ಸಂಭವಿಸಿವೆ. ಅಲ್ಲೆಲ್ಲ ಮೊದಲಿಗೆ ರಾಜೀನಾಮೆ ಕೊಡಬೇಕು. ರಾಜಕೀಯ ಅಧಿಕಾರಕ್ಕಿಂತ ಸಮಸ್ಯೆ ಬಗೆಹರಿದು ಸತ್ತವರು ಮರಳುವುದು ಮುಖ್ಯ ಎನ್ನುತ್ತಲೇ ಸಿ.ಟಿ.ರವಿ ಪ್ರತಿಪಕ್ಷಗಳ ಟೀಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಚಾಮರಾಜನಗರದಲ್ಲಿನ ದುರಂತದ ಬಗ್ಗೆ ಗಮನಕ್ಕೆ ಬಂದ ಕೂಡಲೇ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದೆ. ಇಂತಹ ಘಟನೆ ಮರುಕಳಿಸದಂತೆ ಎಲ್ಲ ಜಿಲ್ಲೆಯಲ್ಲೂ ಸಮರ್ಪಕವಾಗಿ ನಿರ್ವಹಣೆ ಆಗಬೇಕಿದೆ ಎಂದರು.
ಸ್ಮಶಾನದಲ್ಲೂ ಹೌಸ್​ಫುಲ್ ಬೋರ್ಡ್! ಶವಗಳ ಹೊತ್ತು ಕ್ಯೂ ನಿಂತ ಆಂಬುಲೆನ್ಸ್

ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
