ಬೆಂಗಳೂರು:‘ಪೇಸಿಎಂ’ ಪೋಸ್ಟರ್ ಪ್ರಕರಣ ಸಂಬಂಧ ಹೈಗ್ರೌಂಡ್ಸ್ ಠಾಣೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಕಾಂಗ್ರೆಸ್​ ಸೋಷಿಯಲ್ ಮೀಡಿಯಾ ಮುಖ್ಯಸ್ಥ ಬಿ.ಆರ್.ನಾಯ್ಡು, ಯೂತ್ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಕೋಆರ್ಡಿನೇಟರ್ ಗಗನ್, ಯೂತ್ ಕಾಂಗ್ರೆಸ್​ ಸೋಷಿಯಲ್ ಮೀಡಿಯಾ ಮುಖ್ಯಸ್ಥ ಪವನ್ ಸೇರಿ ಐವರು ಬಂಧಿತರು.
ಕಾಂಗ್ರೆಸ್​ ಪಕ್ಷ ಬುಧವಾರ ಬೆಳಗಿನ ಜಾವ ಬೆಂಗಳೂರು ನಗರದ ವಿವಿಧೆಡೆ ಪೇಟಿಎಂ ಪೋಸ್ಟರ್​ ಹೋಲುವ ರೀತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರ ಸಹಿತ “ಇಲ್ಲಿ 40 ಪರ್ಸೆಂಟ್​ ಸ್ವೀಕರಿಸಲಾಗುತ್ತದೆ” ಎಂಬ ಒಕ್ಕಣೆಯೊಂದಿಗೆ ಕ್ಯೂಆರ್​ ಕೋಡ್​ ಇರುವ “ಪೇಸಿಎಂ” ಹೆಸರಿನ ಪೋಸ್ಟರ್​ಗಳನ್ನು ಅಂಟಿಸಿತ್ತು.
ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟುಮಾಡಿರುವ ಪೇಸಿಎಂ ಪೋಸ್ಟರ್​ ಸಂಬಂಧ ಐದಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬಿಬಿಎಂಪಿ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಸದಾಶಿವನಗರ, ಹೈಗ್ರೌಂಡ್ಸ್​, ಶೇಷಾದ್ರಿಪುರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಎಫ್​ಐಆರ್​ ದಾಖಲಾಗಿವೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಇದನ್ನು ಖಂಡಿಸಿ ಕಾಂಗ್ರೆಸ್​ ತೀವ್ರ ಆಕ್ರೋಶ ಹೊರಹಾಕಿದೆ. ಪ್ರಜಾಪ್ರಭುತ್ವದ ಅಡಿ ನಾವು ಕೆಲಸ ಮಾಡ್ತಿದ್ದೇವೆ. 40% ಕಮಿಷನ್ ಸರ್ಕಾರ ಅಂತ ನಾವೆಲ್ಲ ಕ್ಯಾಂಪೇನ್ ಮಾಡಿದ್ದೇವೆ. ಬಿಜೆಪಿ ವಿರುದ್ದ ಮಾಧ್ಯಮದ ಸೋರ್ಸ್ ರೇಟ್ ಕಾರ್ಡ್ ಬಳಸಿ ನಾವು ಮಾಡಿದ್ದೇವೆ. ನಾಳೆ ಕಾಂಗ್ರೆಸ್​ನ ಎಲ್ಲ ಶಾಸಕರು ಮತ್ತು ವಿಧಾನ ಪರಿಸತ್​ ಸದಸ್ಯರುಗಳು ಒಟ್ಟಾಗಿ ಎಲ್ಲ ಸರ್ಕಾರಿ ಕಟ್ಟಡಗಳ ಮೇಲೆ ಪೇಸಿಎಂ ಪೋಸ್ಟರ್ ಅಂಟಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.
‘PAYCM’ ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ಕೌಂಟರ್: ಸಿದ್ದು-ಡಿಕೆಶಿ ಫೋಟೋ ಹಾಕಿ ಅಣಕಿಸಿದ ಕಮಲಪಡೆ

ಬಡತನ ಮೆಟ್ಟಿ ನಿಲ್ಲಬೇಕು ಅನ್ನುವಷ್ಟರಲ್ಲಿ ಆಟವಾಡಿದ ವಿಧಿ… ಸಾವಲ್ಲೂ ಸಾರ್ಥಕತೆ ಮೆರದ ಪಿಯು ವಿದ್ಯಾರ್ಥಿನಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + nine =
Remember me
