ಬೆಂಗಳೂರು:ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದೆ. ಧ್ವನಿವರ್ಧಕ ಬಳಸುವವರು ಇನ್ಮುಂದೆ ಅನುಮತಿ ಪಡೆಯುವುದು ಕಡ್ಡಾಯ.
ಸುಪ್ರೀಂಕೋರ್ಟ್‌ ಆದೇಶದ ಹೊರತಾಗಿಯೂ ಹಲವು ಮಸೀದಿಗಳಲ್ಲಿ ಧ್ವನಿವರ್ಧಕಗಳಲ್ಲಿ ಆಜಾನ್‌ ಹೇಳುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಸುಪ್ರಭಾತ ಅಭಿಯಾನಕ್ಕೆ ಮೇ 9ರಂದು ಚಾಲನೆ ನೀಡಿತ್ತು. ಆಜಾನ್​ಗೆ ಪ್ರತಿಯಾಗಿ ಬ್ರಾಹ್ಮಿ ಮುಹೂರ್ತದಲ್ಲಿ ರಾಜ್ಯದ ವಿವಿಧ ದೇಗುಲಗಳಲ್ಲಿ ಏಕಕಾಲದಲ್ಲಿ ಸುಪ್ರಭಾತ ಮತ್ತು ಹನುಮಾನ್‌ ಚಾಲೀಸಾ ಮೊಳಗಿದೆ. ಆಜಾನ್​ ವರ್ಸಸ್​ ಸುಪ್ರಭಾತ ವಿವಾದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರ, ಲೌಡ್ ಸ್ಪೀಕರ್ ಬಳಸುವವರು ಅನುಮತಿ ಪಡೆಯುವುದು ಕಡ್ಡಾಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್​ ಮೀರುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಧಾರ್ಮಿಕ ಕೇಂದ್ರಗಳು ಮಾತ್ರವಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಭೆ, ಸಮಾರಂಭಗಳಿಗೂ ಈ ನಿಯಮ ಅನ್ವಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್​ ಮೀರುವಂತಿಲ್ಲ, ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಸುಪ್ರೀಂ ಕೋರ್ಟಿನ ತೀರ್ಪಿನಂತೆ ಎಲ್ಲರೂ ನಡೆದುಕೊಳ್ಳಬೇಕು. ಧ್ವನಿವರ್ಧಕ ಬಳಸಲು 15 ದಿನ ಮೊದಲೇ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಸರ್ಕಾರ ಉಲ್ಲೇಖಿಸಿದೆ.
ಇದು ಸತ್ತವರನ್ನು ಬದುಕಿಸೋ ಜಾತ್ರೆ! ಕೊಳ್ಳೇಗಾದಲ್ಲಿ ರಾತ್ರಿಯಿಡೀ ನಡೆಯಿತು ನರಬಲಿ ವಿಸ್ಮಯ…

ಬಿಕಿನಿ ಧರಿಸಿಕೊಂಡೇ ಬರ್ತ್​ ಡೇ ಕೇಕ್​ ಕತ್ತರಿಸಿದ ಆಮಿರ್​ ಖಾನ್​ ಪುತ್ರಿ ಇರಾ! ಫೋಟೋ ವೈರಲ್​, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 1 =
Remember me
