ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ ಆಫ್ರಿಕಾದ ಇಥಿಯೋಪಿಯಾ ಮೂಲದ ವ್ಯಕ್ತಿಯ ಆರೋಗ್ಯ ತಪಾಸಣಾ ವರದಿಯಲ್ಲಿ ಮಂಕಿಪಾಕ್ಸ್ ನೆಗಟೀವ್ ಎಂದು ಧೃಢಪಟ್ಟಿದ್ದು, ಚಿಕನ್​ಪಾಕ್ಸ್ ಇರುವುದು ಪತ್ತೆಯಾಗಿದೆ. ಈ ಕುರಿತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್​ ಅವರೇ ಟ್ವೀಟ್​ ಮೂಲಕ ತಿಳಿಸಿದ್ದಾರೆ.
ಇಥಿಯೋಪಿಯಾ ಮೂಲದ 55 ವರ್ಷದ ವ್ಯಕ್ತಿಯೊಬ್ಬರು ಮೂತ್ರಪಿಂಡ ಕಸಿ ಶಸ್ತ್ರ ಚಿಕಿತ್ಸೆಗಾಗಿ ಕಳೆದ ಜು. 4ರಂದು ಕರ್ನಾಟಕಕ್ಕೆ ಆಗಮಿಸಿದ್ದು. ಬೆಂಗಳೂರಿನ ಹೆಬ್ಬಾಳ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಇವರನ್ನು ನಿತ್ಯ ಡಯಾಲಿಸಿಸ್​ಗೆ ಒಳಪಡಿಸಲಾಗುತ್ತಿತ್ತು. ಕೆಲ ದಿನಗಳಿಂದ ವ್ಯಕ್ತಿಯ ಮೈಮೇಲೆ ಸಣ್ಣ ಗುಳ್ಳೆಗಳು ಹರಡಿಕೊಂಡಿದ್ದು, ಅದು ಮಂಕಿಪಾಕ್ಸ್​ ಲಕ್ಷಣಗಳೆಂದು ವೈದ್ಯರು ಗುರುತಿಸಿ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದರು.
ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು.
ಈಗ ಅವರ ಪರೀಕ್ಷಾ ವರದಿಯಲ್ಲಿ ಮಂಕಿಪಾಕ್ಸ್ ನೆಗಟೀವ್ ಎಂದು ಧೃಢಪಟ್ಟಿದ್ದು, ಚಿಕನ್ ಪಾಕ್ಸ್ ಇರುವುದು ಪತ್ತೆಯಾಗಿದೆ.
1/2
— Dr Sudhakar K (@mla_sudhakar)July 31, 2022

ಮಂಕಿಪಾಕ್ಸ್​ ಸೋಂಕು ಲಕ್ಷಣ ಕಂಡು ಬಂದ ಹಿನ್ನೆಲೆ ಈ ವ್ಯಕ್ತಿಯ ದೇಹದ ರಕ್ತದ ಮಾದರಿ, ಗಂಟಲ ದ್ರವ, ಗುಳ್ಳೆಗಳ ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆ (ಎನ್​ಐವಿ)ಗೆ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಈ ವ್ಯಕ್ತಿಗೆ ಇರೋದು ಮಂಕಿಪಾಕ್ಸ್​ ಅಲ್ಲ, ಚಿಕನ್​ ಪಾಕ್ಸ್​ ಎಂದು ಗೊತ್ತಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
