ಬೆಂಗಳೂರು:ದೇಶಾದ್ಯಂತ ಪಾಪುಲರ್​ ಫ್ರಂಟ್​ ಆಫ್​ ಇಂಡಿಯಾ(ಪಿಎಫ್​ಐ) ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಕಾಂಗ್ರೆಸ್​ ಸ್ವಾಗತಿಸಿದೆ.
ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ವಿರೋಧಿಸಿಕೊಂಡೇ ಬಂದಿದೆ. PFI ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್​ ಟ್ವೀಟ್​ ಮಾಡಿದೆ.
ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ.
PFI ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ.
— Karnataka Congress (@INCKarnataka)September 28, 2022

ಪಿಎಫ್​ಐ ಬ್ಯಾನ್ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಯಾರು ಕಾನೂನಿಗೆ ವಿರುದ್ಧವಾಗಿ ಇರ್ತಾರೆ, ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಾರೋ ಅಂತಹವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ. ಅದೇ ರೀತಿ ಆರ್​ಎಸ್​ಎಸ್​ ಅವರೂ ಸಮಾಜದಲ್ಲಿ ಶಾಂತಿ ಹಾಳು ಮಾಡ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಪಿಎಫ್​ಐ ಬ್ಯಾನ್​ ಮಾಡಿದ ಬಳಿಕ ‘ನಾವು ನುಡಿದಂತೆ ನಡೆದಿದ್ದೇವೆ’ ಎಂಬ ಬಿಜೆಪಿ ಟ್ವೀಟ್​ಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಇಷ್ಟು ದಿನ ಯಾಕೆ ಮಾಡಿರಲಿಲ್ಲ? ಇಷ್ಟು ದಿನ ಏನ್ ಮಾಡ್ತಿದ್ದರು? ನಾವು ಹೇಳಿದ ಮೇಲೆ ಅವರು ಬ್ಯಾನ್ ಮಾಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
The belated action of#PFIBanis a step in right direction after prolonged vacillation.
When will the BJP Govt now act against “the other side of same coin” organizations close to BJP-RSS?
Communalism & hate in all forms is harmful to societal fabric & must be curbed.https://t.co/9aAU0s7KgU
— Randeep Singh Surjewala (@rssurjewala)September 28, 2022

ಸುದೀರ್ಘವಾದ ಚಂಚಲತೆಯ ನಂತರ ಒಂದು ಸರಿಯಾದ ದಿಕ್ಕಿನಲ್ಲಿ ಹೆಜ್ಜೆ ಇಡಲಾಗಿದೆ. PFI ಜತೆಗೆ ಒಂದೇ ನಾಣ್ಯದ ಇನ್ನೊಂದು ಮುಖ ಆಗಿರುವ RSS ವಿರುದ್ಧ ಯಾವಾಗ ಕ್ರಮ ಕೈಗೊಳ್ಳುತ್ತೆ ಬಿಜೆಪಿ? ಎಲ್ಲಾ ರೀತಿಯ ಕೋಮುವಾದ ಮತ್ತು ದ್ವೇಷ ಸಮಾಜದ ರಚನೆಗೆ ಹಾನಿಕಾರಕ ಆಗಿರುವ ಅದನ್ನು ನಿಗ್ರಹಿಸುವ ಕೆಲಸ ಆಗಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದ್ದಾರೆ.
‘ನವ ಮುಸಲ್ಮಾನ’ರಿಂದ ಹಿಂದು ಯುವತಿಯರ ಟಾರ್ಗೆಟ್​! ದೇಶವ್ಯಾಪಿ ಹರಡಿದೆ ಜಾಲ, ಆಘಾತಕಾರಿ ಸಂಗತಿ ಬಯಲು

ಪರಸ್ಪರ ಮದ್ವೆಯಾಗಲು ನಿರ್ಧರಿಸಿದ್ದ ಬೆಂಗಳೂರಿನ ಶಾಲಾ ಬಾಲಕಿಯರು… ಇವರ ಕರುಣಾಜನಕ ಕಥೆ ಕೇಳಿದ್ರೆ ಕರುಳುಹಿಂಡುತ್ತೆ…

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:17 + eighteen =
Remember me
