ಮಂಗಳೂರು:ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಿದ್ದು, ಅಭಿಮಾನಿಗಳಿಂದ ಹರ್ಷೋದ್ಘಾರ ಮೊಳಗುತ್ತಿದೆ. ಸಹಸ್ರಾರು ಕಾರ್ಯಕರ್ತರು ರಸ್ತೆಯ ಬದಿಯಲ್ಲೂ ನಿಂತು ಜೈ ಮೋದಿ ಎಂದು ಘೋಷಣೆ ಕೂಗುತ್ತಾ ಸ್ವಾಗತಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ 1.35ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರು, ಅಲ್ಲಿಂದ ಎನ್ಎಂಪಿಎ ಹೆಲಿಪ್ಯಾಡ್‌ಗೆ ಸೇನಾ ಹೆಲಿಕಾಪ್ಟರಿನಲ್ಲಿ ಬಂದಿಳಿದರು. ಅಲ್ಲಿಂದ ರಸ್ತೆ ಮಾರ್ಗವಾಗಿ 2 ಗಂಟೆಗೆ ಸಮಾವೇಶ ನಡೆಯುವ ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಆಗಮಿಸಿದರು. ಮೋದಿ ಅವರನ್ನ ಸ್ವಾಗತಿಸಲು ಸರತಿ ಸಾಲಿನಲ್ಲಿ ರಾಜ್ಯ ನಾಯಕರು ನಿಂತಿದ್ದರೆ, ಅತ್ತ ಮೋದಿ ಅವರನ್ನ ನೋಡಲು ವೇದಿಕೆ ಹಿಂಭಾಗದಲ್ಲಿ ಗುಂಪು ಗುಂಪಾಗಿ ಅಭಿಮಾನಿಗಳು ಕಾಯುತ್ತಿದ್ದ ದೃಶ್ಯ ಕಂಡು ಬಂತು.

ನಗರದ ಗೋಲ್ಡ್ ಫಿಂಚ್ ಸಿಟಿಯಲ್ಲಿ ಹಮ್ಮಿಕೊಂಡಿರುವ ವೇದಿಕೆ ಕಾರ್ಯಕಮಕ್ಕೆ ಆಗಮಿಸಿದ ಪ್ರಧಾನಿ ಅವರಿಗೆ ಮಡಿಕೇರಿ ಪೇಟ ತೊಡಿಸಲಾಯಿತು. ಈ ಭಾಗದ ವಿಶೇಷ ಮಲ್ಲಿಗೆ ಹಾರವನ್ನು ಮೋದಿ ಅವರಿಗೆ ನಳಿನ್​ ಕುಮಾರ್​ ಕಟೀಲ್ ಹಾಕಿದರೆ, ಪರಶುರಾಮ ವಿಗ್ರಹವನ್ನು ಸುನೀಲ್ ಕುಮಾರ್ ನೀಡಿದರು. ಸಿಎಂ ಬಸವರಾಜಬೊಮ್ಮಾಯಿ ಅವರು ಹಸಿರು ಶಾಲು ಹೊದಿಸಿ ನಮಸ್ಕರಿಸಿದರು.

ನವಮಂಗಳೂರು ಬಂದರು, ಎಂಆರ್‌ಪಿಎಲ್, ಮೀನುಗಾರಿಕಾ ಬಂದರು ಸಹಿತ 3,800 ಕೋಟಿ ರೂ. ವೆಚ್ಚದ ಯೋಜನೆಗಳ ಶಿಲಾನ್ಯಾಸ-ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದಾರೆ.
LIVE| ಮಂಗಳೂರಲ್ಲಿ ನರೇಂದ್ರ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
