ನವದೆಹಲಿ:ಕರೊನಾ ಸವಾಲು ಇನ್ನೂ ಮುಗಿದಿಲ್ಲ. ಶಾಲೆ ಆರಂಭದ ಹೊತ್ತಲ್ಲಿ ಕರೊನಾ 4ನೇ ಅಲೆಯ ಭೀತಿ ಹುಟ್ಟಿದೆ. ಒಮಿಕ್ರಾನ್​ ಉಪತಳಿ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ಆರಂಭಿಕ ಹಂತದಲ್ಲೇ ಸೋಂಕು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದೇಶದ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದರು. ಅಷ್ಟೇ ಅಲ್ಲ ದೇಶದಲ್ಲಿರುವ ಬಿಜೆಪಿಯೇತರ ರಾಜ್ಯಗಳಲ್ಲಿ ಪೆಟ್ರೋಲ್​, ಡಿಸೇಲ್​ ದರ ಕಡಿಮೆ ಮಾಡಿ ಎಂದು ಮನವಿ ನೀಡಿದ್ದಾರೆ.
ದೇಶದಲ್ಲಿ ಕರೊನಾ ನಾಲ್ಕನೇ ಅಲೆ ಆತಂಕ ಹಿನ್ನೆಲೆ ಬುಧವಾರ ಬೆಳಗ್ಗೆ ಎಲ್ಲ ರಾಜಗ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚುವಲ್​ ಸಭೆ ನಡೆಸಿದ ಪ್ರಧಾನಿ, ಬಳಿಕ ಮಾತನಾಡಿದರು. ಈಗಾಗಲೇ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಎಲ್ಲರಿಗೂ ಕರೊನಾ 2 ಲಸಿಕೆ ನೀಡಲಾಗಿದೆ. ಬೂಸ್ಟರ್​​ ಡೋಸ್​ ನೀಡಲಾಗುತ್ತಿದೆ. 6-12 ವರ್ಷದ ಮಕ್ಕಳಿಗೂ ಕರೊನಾ ಸಲಿಕೆ ಹಾಕಲು ಅನುಮತಿ ಸಿಕ್ಕಿದೆ. ಎಲ್ಲ ಮಕ್ಕಳಿಗೂ ಆದಷ್ಟು ಬೇಗ ಲಸಿಕೆ ವಿತರಣೆ ಮಾಡಲಾಗುತ್ತೆ. ಈಗಾಗಲೇ ಹಲವು ಶಾಲೆಗಳು ಆರಂಭವಾಗಿವೆ. ಇಂತಹ ಸಂದರ್ಭದಲ್ಲಿ ಕರೊನಾ 4ನೇ ಅಲೆ ಪೋಷಕರಲ್ಲಿ ಸಹಜವಾಗಿ ಆತಂಕ ಹುಟ್ಟಿಸಿದೆ. ಕರೊನಾದಿಂದ ಬಚಾವ್​ ಆಗಲು ಲಸಿಕೆ ಅತ್ಯಗತ್ಯ. ದೇಶದ ಅಭಿವೃದ್ಧಿ ಜತೆಗೆ ಕರೊನಾ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರತವಾಗಿವೆ. ಸಾರ್ವಜನಿಕರ ಹಿತದೃಷ್ಟಿಯ ನಿಟ್ಟಿನಲ್ಲಿ ಕಾರ್ಯ ಭರದಿಂದ ಸಾಗಿದೆ ಎಂದರು.

ಕರೊನಾ ಸಂದರ್ಭದಲ್ಲಿ ಜನರಿಗೆ ಹೊರೆಯಾಗುತ್ತೆ. ಗುವಾಹಟಿಯಲ್ಲಿ 1 ಲೀಟರ್​ ಪೆಟ್ರೋಲ್​ ಬೆಲೆ 103 ರೂ. ಇದೆ, ಆದರೆ ಮುಂಬೈನಲ್ಲಿ 120 ರೂಪಾಯಿ ಇದೆ. ಎಲ್ಲೆಲ್ಲಿ ಬೆಲೆ ಹೆಚ್ಚಳ ಇದೆಯೋ ಸುಂಕ ಕಡಿಮೆ ಮಾಡಿ ಎಂದು ಮನವಿ ಮಾಡಿದ ಪ್ರಧಾನಿ, ಕರೊನಾ ಸಂಕಷ್ಟ ಕಾಲದಲ್ಲಿ ಜನರಿಗೆ ಹೊರೆ ಆಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಹಿಂದೆ ಸುಂಕ ಕಡಿಮೆ ಮಾಡುವಂತೆ ಕೇಂದ್ರದಿಂದ ಸೂಚನೆ ನೀಡಲಾಗಿತ್ತು. ಆದರೆ, ಬಿಜೆಪಿಯೇತರ ಕೆಲ ರಾಜ್ಯಗಳಲ್ಲಿ ಇಳಿಕೆ ಮಾಡಿಲ್ಲ. ಕರ್ನಾಟಕ ಮತ್ತು ಗುಜರಾತ್​ನಲ್ಲಿ ಕಳೆದ ನವೆಂಬರ್​ನಲ್ಲಿ ಇಳಿಕೆ ಮಾಡಲಾಗಿತ್ತು. ಈ ವಿಚಾರದಲ್ಲಿ ಎರಡೂ ರಾಜ್ಯಗಳು ಮಾದರಿ ಎಂದು ಪ್ರಧಾನಿ ಹೇಳಿದರು.
ಆನೆ ದಂತದಲ್ಲಿ ಮಾಡಿದ ಚೆಸ್​ ಪಾನ್​, ಬುರುಡೆ ಸಹಿತ ಜಿಂಕೆ ಕೊಂಬು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ! ಅಜ್ಜನ ಕಾಲದ್ದು….

ಶಿಕ್ಷಕಿ ಜೊತೆ ಶಾಲೆಯಲ್ಲೇ ಸಂಭೋಗ ನಡೆಸಿದ ಪ್ರಿನ್ಸಿಪಾಲ್! ಗ್ರಾಮಸ್ಥರ ಎಚ್ಚರಿಕೆ ನಡುವೆಯೂ ಕಾಮದಾಟ ಮುಂದುವರಿಸಿದ್ದ ಜೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + three =
Remember me
