ಹುಬ್ಬಳ್ಳಿ:ಎಲ್ಲವೂ ಅಂದುಕೊಂಡತೆ ಇದ್ದರಿದ್ದರೆ ಪೊಲೀಸ್​ ಪೇದೆಯ ಮನೆಯಲ್ಲಿ ಇನ್ನು 18 ದಿನದಲ್ಲಿ ಮದುವೆ ಸಂಭ್ರಮ ಮನೆ ಮಾಡಬೇಕಿತ್ತು. ಆದರೆ ವಿಧಿಯಾಟ ಬೇರೆಯೇ ಆಗಿತ್ತು. ಟ್ರಾಫಿಕ್​ ಕ್ಲಿಯರ್​ ಮಾಡಲು ಸ್ಥಳಕ್ಕೆ ಬಂದ ಕರ್ತವ್ಯನಿರತ ಪೊಲೀಸ್​ ಪೇದೆಯ ಪ್ರಾಣವನ್ನ ಲಾರಿ ರೂಪದಲ್ಲಿ ಬಂದ ಜವರಾಯ ಹೊತ್ತೊಯ್ದಿದ್ದಾನೆ. ಪೇದೆ ಜತೆಗೆ ಮತ್ತೊಬ್ಬನೂ ಮೃತಪಟ್ಟಿದ್ದು, ಅಪಘಾತದ ಭೀಕರತೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಇಂತಹ ದುರ್ಘಟನೆ ಮಂಗಳವಾರ ರಾತ್ರಿ ಹುಬ್ಬಳ್ಳಿ- ಕಾರವಾರ ರಸ್ತೆ ಬುಡನಾಳ ಕ್ರಾಸ್ ಬಳಿ ಸಂಭವಿಸಿದೆ. ಪೊಲೀಸ್​ ಪೇದೆ ಪಂಡಿತ ಕಾಸರ್(28) ಹಾಗೂ ಮತ್ತೊಬ್ಬ ಬೈಕ್ ಸವಾರ ಮೃತರು. ಮತ್ತೊಬ್ಬ ಕಾನ್ಸ್‌ಟೇಬಲ್ ಹಾಗೂ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಕಲಘಟಗಿ ತಾಲೂಕಿನ ಸಂಗಮೇಶ್ವರ ಗ್ರಾಮದ ನಿವಾಸಿ ಪಂಡಿತ ಕಾಸರ್​ ಅವರು ಮೂರು ವರ್ಷದ ಹಿಂದೆ ಸೇವೆಗೆ ಸೇರಿದ್ದರು. ಏಪ್ರಿಲ್ 23ರಂದು ಅವರ ವಿವಾಹ ನಿಗದಿಯಾಗಿತ್ತು. ಮಂಗಳವಾರ ಬೆಳಗ್ಗೆ ಹುಬ್ಬಳ್ಳಿಗೆ ಬಂದು ಚಿನ್ನಾಭರಣ ಖರೀದಿಸಿದ್ದರು ಎಂದು ಅವರ ಸಹೋದ್ಯೋಗಿಗಳು ಕಣ್ಣೀರು ಹಾಕಿದರು.
ಮಂಗಳವಾರ ರಾತ್ರಿ ಹುಬ್ಬಳ್ಳಿ ತಾಲೂಕಿನ ಬುಡನಾಳ ಕ್ರಾಸ್ ಬಳಿ ಮಳೆ- ಗಾಳಿಯಿಂದ ರಸ್ತೆಯಲ್ಲಿ ಮರ ಉರುಳಿ ಬಿದ್ದಿತ್ತು. ಪರಿಣಾಮ ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗಿ, ಬೈಕ್ ಅಪಘಾತಕ್ಕೀಡಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಟ್ರಾಫಿಕ್ ಕ್ಲಿಯರ್ ಮಾಡಲು ಸ್ಥಳಕ್ಕೆ ಪೊಲೀಸರು ಬಂದಿದ್ದರು. ಈ ವೇಳೆ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ತೀವ್ರ ಗಾಯಗೊಂಡ ಪಂಡಿತ ಕಾಸರ್​ ಮತ್ತು ಬೈಕ್​ ಸವಾರ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ ಆಗಿದ್ದವ ಇದ್ದಕ್ಕಿದ್ದಂತೆ ಏನಾದ?

ಬೆಂಗ್ಳೂರಲ್ಲಿ ಕನ್ನಡ ಮಾತನಾಡಿದ್ದಕ್ಕೆ ಯುವಕನ ಕೊಲೆ! ಸ್ಫೋಟಕ ರಹಸ್ಯ ಬಿಚ್ಚಿಟ್ಟ ಹೋಂ ಮಿನಿಸ್ಟರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 12 =
Remember me
