ಎಚ್​.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್​.ಡಿ.ಕೋಟೆ ತಾಲೂಕಿನ ಜಿನ್ನಹಳ್ಳಿಯಲ್ಲಿ ಅಂಗವಿಕಲ ಮಹಿಳೆ ಮೇಲೆ ಮೈದುನನೇ ಅತ್ಯಾಚಾರಕ್ಕೆ ಯತ್ನಿಸಿದ್ದು, ವಿರೋಧ ಮಾಡಿದ್ದಕ್ಕೆ ಮಹಿಳೆ(ಅತ್ತಿಗೆ)ಯನ್ನ ಕೊಲ್ಲಲು ಚಾಕುವಿನಿಂದ ಇರಿದಿದ್ದಾನೆ. ಇದನ್ನು ತಡೆಯಲು ಬಂದ ಆಕೆಯ ಅಣ್ಣನಿಗೂ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ನಾಗನಾಯಕ (33) ಆರೋಪಿ. ಮೂಗಣ್ಣ ಅವರ ಪತ್ನಿ ಹಾಗೂ ಈಕೆಯ ಸಹೋದರ ಮರಳೂರು ನಾಯಕ ಗಂಭೀರ ಗಾಯಗೊಂಡಿದ್ದು, ಮೈಸೂರಿನ ಕೆ.ಆರ್​.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಏನಿದು ಘಟನೆ?:ಪತಿ ಮೂಗಣ್ಣ ಅವರಿಂದ ಹತ್ತು ವರ್ಷಗಳ ಹಿಂದೆ ಬೇರ್ಪಟ್ಟ ಪತ್ನಿ, ಅದೇ ಗ್ರಾಮದಲ್ಲಿರುವ ತಂದೆಯ ಮನೆ ಪಕ್ಕದಲ್ಲಿ ತನ್ನಿಬ್ಬರು ಗಂಡು ಮಕ್ಕಳ ಜತೆ ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಶನಿವಾರ ಮಕ್ಕಳು ಕೆಲಸಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ಮೈದುನ (ಗಂಡನ ತಮ್ಮ) ನಾಗನಾಯಕ ಕುಡಿದ ಮತ್ತಿನಲ್ಲಿ ಮನೆಯೊಳಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ರಕ್ಷಣೆಗಾಗಿ ಕೂಗಿಕೊಂಡಾಗ ಪಕ್ಕದ ಮನೆಯಲ್ಲಿದ್ದ ಆಕೆಯ ಸಹೋದರ ಮರಳೂರು ನಾಯಕ ಓಡಿ ಬಂದಿದ್ದಾರೆ. ಈ ಸಂದರ್ಭದಲ್ಲಿ ನಾಗನಾಯಕ ಚಾಕುವಿನಿಂದ ಅತ್ತಿಗೆಯ ಬೆನ್ನಿಗೆ ಇರಿದಿದ್ದು, ತಡೆಯಲು ಬಂದ ಮರಳೂರು ನಾಯಕ ಅವರ ಹೊಟ್ಟೆ, ತೊಡೆ, ತೋಳಿನ ಭಾಗಕ್ಕೆ ಇರಿದು ಪರಾರಿಯಾಗಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಣ್ಣ-ತಂಗಿಯನ್ನು ಗ್ರಾಮಸ್ಥರು ಹಂಪಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್​.ಆಸ್ಪತ್ರೆಗೆ ದಾಖಲಿಸಿದ್ದಾರೆ.
ಎಚ್​.ಡಿ.ಕೋಟೆ ಪಟ್ಟಣ ಠಾಣೆ ಸರ್ಕಲ್​ ಇನ್​ಸ್ಪೆಕ್ಟರ್​ ಬಸವರಾಜು ಅವರ ಮಾರ್ಗದರ್ಶನದಲ್ಲಿ ಹಂಪಾಪುರ ಉಪ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಪರಾರಿಯಾಗಿರುವ ಆರೋಪಿ ನಾಗನಾಯಕನ ಬಂಧನಕ್ಕೆ ಬಲೆ ಬೀಸಿದ್ದಾರೆ.
ಎಫ್​​ಡಿಎ ನೌಕರಿ ಆಮಿಷವೊಡ್ಡಿ 25 ಲಕ್ಷ ರೂ. ವಂಚನೆ! ದಂಪತಿ ಸೇರಿ ಮೂವರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್​

ರಾಜ್ಯದಲ್ಲಿ ಬೆರಕೆ ಸರ್ಕಾರ ಬರೋದು ಗ್ಯಾರಂಟಿ.. ದೇಶಕ್ಕೆ ಕೇಡು ಖಚಿತ… ಹಾಸನಾಂಬೆ ಸನ್ನಿಧಿಯಲ್ಲಿ ಬ್ರಹ್ಮಾಂಡ ಗುರೂಜಿ ಭವಿಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
