ನೆಲಮಂಗಲ:ತಿಂಗಳ ಹಿಂದಷ್ಟೇ ದಾಪಂತ್ಯ ಜೀವನಕ್ಕೆ ಕಾಲಿಟ್ಟಿದ್ದ ಮಹಿಳಾ ಪೊಲೀಸ್​ ಪೇದೆಯೊಬ್ಬರು ಗಂಡನ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕು ಚಿಕ್ಕಗೊಲ್ಲರಹಟ್ಟಿಯಲ್ಲಿ ಸಂಭವಿಸಿದೆ.
ತುಮಕೂರಿನ ನಾಯಕನಪಾಳ್ಯ ಮೂಲದ ನೇತ್ರಾ(27) ಮೃತ ದುರ್ದೈವಿ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿದ್ದ ನೇತ್ರಾಗೆ ಪೀಣ್ಯಾ ಸಂಚಾರಿ ಪೊಲೀಸ್ ಠಾಣೆ ಪೇದೆ ಮಂಜುನಾಥ್ ಜತೆ ಕಳೆದ ತಿಂಗಳು ಮದುವೆ ಆಗಿತ್ತು. ಇವರಿಬ್ಬರೂ ಪರಸ್ಪರ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರೂ ಚಿಕ್ಕಗೊಲ್ಲರಹಟ್ಟಿಯ ಮನೆಯೊಂದರಲ್ಲಿ ವಾಸವಿದ್ದರು.
ಅಡುಗೆ ಮಾಡುವ ವಿಚಾರಕ್ಕೆ ಗಂಡನ ಮೇಲೆ ಬೇಸರಗೊಂಡ ನೇತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪತಿ ಮಂಜುನಾಥ್​ನನ್ನು ವಶಕ್ಕೆ ಪಡೆದ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ತುಮಕೂರಲ್ಲಿ ಮುಂಡ, ಬಾಗಲಕೋಟೇಲಿ ರುಂಡ ಪತ್ತೆ! ಬಯಲಾಯ್ತು ಸೊಸೆ-ಬಿಎಂಟಿಸಿ ಬಸ್​ ಕಂಡಕ್ಟರ್​ ಅಸಲಿ ಮುಖವಾಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
