ದೊಡ್ಡಬಳ್ಳಾಪುರ:ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೆ ಒಳಗಾಗಿದೆ.
ತುಮಕೂರು ಜಿಲ್ಲೆ ಪಾವಗಡದಲ್ಲಿ ಬಸ್​ ಅಪಘಾತಕ್ಕೀಡಾಗಿ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಯೋಗಕ್ಷೇಮ ವಿಚಾರಿಸಲು ಮಾಜಿ ಸಿಎಂ ಎಚ್​ಡಿಕೆ ತೆರಳುತ್ತಿದ್ದ ಮಾರ್ಗಮಧ್ಯೆ ಈ ಘಟನೆ ನಡೆದಿದೆ. ಅದೃಷ್ಟವಶಾತ್​ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಬೆಂಗಾವಲು ವಾಹನದಲ್ಲಿದ್ದ ಸಿಬ್ಬಂದಿಯೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಪಾವಗಡ ಬಸ್​ ದುರಂತದಲ್ಲಿನ ಗಾಯಾಳುಗಳ ಯೋಗಕ್ಷೇಮ ವಿಚಾರಿಸಲು ಎಚ್​ಡಿಕೆ ದೊಡ್ಡಬಳ್ಳಾಪುರ ಮಾರ್ಗವಾಗಿ ಮಧ್ಯಾಹ್ನ ತುಮಕೂರಿಗೆ ತೆರಳುತ್ತಿದ್ದರು. ಮಾರ್ಗಮಧ್ಯೆ ನಗರದ ಡೇರಿ ಸರ್ಕಲ್​ ಮುಂಭಾಗ ಎಚ್​​ಡಿಕೆ ಮುಂದೆ ಹೋಗುತ್ತಿದ್ದರು. ಅವರ ಹಿಂದೆ ಬೆಂಗಾವಲು ಪಡೆ ಬರುತ್ತಿತ್ತು. ಈ ವೇಳೆ ಎದುರುಗಡೆಯಿಂದ ವಾಹನವೊಂದು ಅಡ್ಡಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಬೆಂಗಾವಲು ವಾಹನ ಚಾಲಕ ಬಲಭಾಗಕ್ಕೆ ತಿರುಗಿಸಿದ್ದಾರೆ. ಪರಿಣಾಮ ರಸ್ತೆಬದಿ ಎರಡು ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದಿದೆ. ರಭಸಕ್ಕೆ ಎರಡು ವಿದ್ಯುತ್​ ಕಂಬಗಳು ಮುರಿದು ಬಿದ್ದಿವೆ. ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ವಾಹನದಲ್ಲಿದ್ದ ಬೆಂಗಾವಲು ಸೇವೆಯ ಐವರು ಪೊಲೀಸ್​ ಸಿಬ್ಬಂದಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಉಳಿದಂತೆ ಹೆಚ್ಚಿನ ಅನಾಹುತ ಆಗಿಲ್ಲ ಎಂದು ತಿಳಿದು ಬಂದಿದೆ.
ಘಟನೆಯಿಂದ ಎಚ್​ಡಿಕೆ ಕೂಡ ಶಾಕ್​ಗೆ ಒಳಗಾಗಿದ್ದರು. ಬಳಿಕ ಹೆಚ್ಚಿನ ಅವಘಡ ಸಂಭವಿಸದೇ ಇದ್ದ ಕಾರಣ ತುಮಕೂರಿಗೆ ಪ್ರಯಾಣ ಬೆಳೆಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ, ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಇನ್ನು ವಿದ್ಯುತ್​ ಕಂಬಗಳು ಮುರಿದುಬಿದ್ದಿದ್ದರಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ಕೆಲ ಗಂಟೆ ವಿದ್ಯುತ್​ ಸಂಪರ್ಕ ಸ್ಥಗಿತಗೊಂಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
