ಚಾಮರಾಜನಗರ:ಕುರಿ ಕದ್ದ ಕಳ್ಳರ ಹಿಂದೆ ಬೀಳುವ ಪೊಲೀಸರು ಕೆಲವೊಮ್ಮೆ ಕುರಿ ಮಾಲೀಕರ ಹುಡುಕಾಟವನ್ನೂ ನಡೆಸಬೇಕಾಗುತ್ತದೆ. ತಾಲೂಕಿನ ಸಂತೇಮರಹಳ್ಳಿ ಠಾಣೆ ಪೊಲೀಸರು ಈಗ ಇದೇ ಪ್ರಯತ್ನದಲ್ಲಿ ತೊಡಗಿದ್ದಾರೆ.
ಶುಕ್ರವಾರ ರಾತ್ರಿ ಕಾವುದವಾಡಿ-ಸಂತೇಮರಹಳ್ಳಿ ರಸ್ತೆಯಲ್ಲಿ ಇಬ್ಬರು ಯುವಕರು ಬೈಕ್​ನಲ್ಲಿ 3 ಕುರಿಗಳನ್ನು ಹೊತ್ತೊಯ್ಯುತ್ತಿದ್ದರು. ಗಸ್ತು ನಡೆಸಲು ಅದೇ ದಾರಿಯಲ್ಲಿ ಬಂದ ಪೊಲೀಸರಿಗೆ ಅನುಮಾನ ಮೂಡಿ ಅವರನ್ನು ಹಿಂಬಾಲಿಸಲು ಶುರು ಮಾಡಿದ್ದಾರೆ‌. ಬೆನ್ನುಬಿದ್ದ ಪೊಲೀಸರನ್ನು ನೋಡಿ ಭಯಗೊಂಡ ಕಳ್ಳರು ಮಹದೇಶ್ವರ ದೇವಸ್ಥಾನದ ಬಳಿ ಕುರಿಗಳನ್ನು ಎಸೆದು ವೇಗವಾಗಿ ಪರಾರಿಯಾಗಿದ್ದಾರೆ.
ಕಳ್ಳರು ಕಣ್ತಪ್ಪಿಸಿಕೊಂಡ ಬಳಿಕ ಅವರು ಬಿಟ್ಟು ಹೋಗಿದ್ದ 3 ಕುರಿಗಳನ್ನು ಪೊಲೀಸರು ಠಾಣೆಗೆ ತಂದು ಆವರಣದಲ್ಲಿ ಕಟ್ಟಿ ಮೇವು ಹಾಕಿದ್ದಾರೆ. ಕಳ್ಳರು ಯಾವ ಊರಿನಲ್ಲಿ, ಯಾರ ಕುರಿ ಕದ್ದಿದ್ದಾರೆ ಎನ್ನುವುದು ಗೊತ್ತಾಗಿಲ್ಲ. ಯಾರೊಬ್ಬರೂ ಕುರಿಗಳು ಕಳವು ಆಗಿವೆ ಎಂದು ದೂರು ನೀಡಲು ಠಾಣೆಗೂ ಬಂದಿಲ್ಲ. ಹೀಗಾಗಿ ಪೊಲೀಸರು ಕುರಿಗಳ ಮಾಲೀಕರ ಹುಡುಕಾಟ ಆರಂಭಿಸಿದ್ದಾರೆ.
ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eighteen − six =
Remember me
