ಬೆಂಗಳೂರು:ರಾಜ್ಯದಲ್ಲಿ ಲೋಡ್​ ಶೆಡ್ಡಿಂಗ್​ ಪ್ರಶ್ನೆಯೇ ಇಲ್ಲ. ಕಲ್ಲಿದ್ದಲು ಕೊರತೆ ಉಂಟಾಗಿದೆ, ವಿದ್ಯುತ್​ ಕ್ಷಾಮವಿದೆ ಎಂಬುದು ಶುದ್ಧ ಸುಳ್ಳು ಎಂದು ಇಂಧನ ಸಚಿವ ವಿ.ಸುನೀಲ್​ ಕುಮಾರ್​ ಸ್ಪಷ್ಟಪಡಿಸಿದರು.
ಕಾಂಗ್ರೆಸ್​ನವರು ಸುಳ್ಳು ಸುದ್ದಿ ಹರಡುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೆ ಲೋಡ್​ ಶೆಡ್ಡಿಂಗ್​ ಆಗುವುದಿಲ್ಲ. ಕಲ್ಲಿದ್ದಲು ಸರಬರಾಜಿನಲ್ಲಿ ಕೊರತೆಯಾಗಿಲ್ಲ. ಬೇಸಿಗೆಯಲ್ಲಿ ವಿದ್ಯುತ್​ ಸಮಸ್ಯೆ ಉಂಟಾಗಬಾರದು ಎಂಬ ಮುಂದಾಲೋಚನೆಯೊಂದಿಗೆ ಸಾಕಷ್ಟು ಎಚ್ಚರಿಕೆ ವಹಿಸಿ ಕಲ್ಲಿದ್ದಲು ದಾಸ್ತಾನಿಗೆ ಆದ್ಯತೆ ನೀಡಲಾಗಿದೆ. ಎಲ್ಲದಕ್ಕಿಂತ ಹೆಚ್ಚಾಗಿ ರಾಜ್ಯದ ಸರಾಸರಿ ಬೇಡಿಕೆಯ ಅರ್ಧದಷ್ಟು ಈಗ ಸೋಲಾರ್​ ಹಾಗೂ ಪವನಶಕ್ತಿಯ ಮೂಲದಿಂದ ಲಭಿಸುತ್ತಿದೆ. ಹೀಗಾಗಿ, ವಿದ್ಯುತ್​ಕ್ಷಾಮ ಎಂಬ ಕಾಂಗ್ರೆಸ್​ ಕಟ್ಟುಕತೆಯಲ್ಲಿ ಅರ್ಥವೇ ಇಲ್ಲ ಎಂದು ಹೇಳಿದರು.
ಬೇಡಿಕೆ ಪೂರೈಸಲು ನಾವು ಸಿದ್ಧ:ರಾಜ್ಯಕ್ಕೆ ಕೇಂದ್ರದಿಂದ ಪ್ರತಿನಿತ್ಯ ಸರಾಸರಿ 13,500 ರಿಂದ 14,500 ರೇಕ್​ ಕಲ್ಲಿದ್ದಲು ಪೂರೈಕೆಯಾಗುತ್ತಿದೆ. ಎಲ್ಲ ವಿದ್ಯುತ್​ ಸ್ಥಾವರಗಳ ಬೇಡಿಕೆಗೆ ಅಗತ್ಯವಾದ ಕಲ್ಲಿದ್ದಲು ಇದರಿಂದ ಲಭಿಸುತ್ತಿದೆ. ಈ ದಿನ ರಾಜ್ಯದಲ್ಲಿ 10,400 ಮೆಗಾ ವ್ಯಾಟ್​ ವಿದ್ಯುತ್​ ಬೇಡಿಕೆ ಇದೆ. ರಾಜ್ಯದ ಇತಿಹಾಸದಲ್ಲೆ ಅತಿ ಹೆಚ್ಚು ಎನ್ನಬಹುದಾದ 14,800 ಮೆಗಾ ವ್ಯಾಟ್​ ವಿದ್ಯುತ್​ ಬೇಡಿಕೆ ಕಳೆದ ಮಾರ್ಚ 21ರಂದು ಎದುರಾಗಿತ್ತು. ಆಗಲೂ ನಮಗೆ ಕಲ್ಲಿದ್ದಲು ಕೊರತೆ ಉಂಟಾಗಿರಲಿಲ್ಲ. ಪೂರೈಕೆಯಲ್ಲಿ ಅಡಚಣೆಗಳು ಆಗಿರಬಹುದು. ಆದರೆ, ಸಾಮಾನ್ಯ ಬೇಡಿಕೆಯ ದಿನದಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಲು ಹೇಗೆ ಸಾಧ್ಯ? ಎಂದು ಇಂಧನ ಸಚಿವ ವಿ.ಸುನೀಲ್​ ಕುಮಾರ್​ ಪ್ರಶ್ನಿಸಿದರು.
ಶಾಖೋತ್ಪನ್ನ ಘಟಕ ಉತ್ಪಾದನೆ ಸ್ಥಗಿತ:ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮವಾಗಿ ಮಳೆಯಾಗುತ್ತಿದೆ. ಇದರಿಂದಾಗಿ ಕೃಷಿ ಪಂಪ್​ ಸೆಟ್​ಗಳಿಗೆ ಅಗತ್ಯವಾದ ವಿದ್ಯುತ್​ ಬೇಡಿಕೆ ಪ್ರಮಾಣ ಕುಗ್ಗಿದೆ. ಬೇಡಿಕೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಬಳ್ಳಾರಿ ಹಾಗೂ ರಾಯಚೂರು ಶಾಖೋತ್ಪನ್ನ ಘಟಕದ ಉತ್ಪಾದನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆಯೇ ಹೊರತು ಕಲ್ಲಿದ್ದಲು ಕೊರತೆಗಾಗಿ ಅಲ್ಲ. ರಾಜ್ಯದಲ್ಲಿ ಪ್ರತಿನಿತ್ಯ 7000 ಮೆಗಾ ವ್ಯಾಟ್​ ಸೋಲಾರ್​ ಹಾಗೂ ಪವನ ವಿದ್ಯುತ್​ ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ ವಿದ್ಯುತ್​ ಕೊರತೆಯ ಪ್ರಶ್ನೆಯೇ ಉದ್ಭವಿಸದು ಎಂದರು.
ಯುಪಿಎಗಿಂತ ಹೆಚ್ಚು ಕಲ್ಲಿದ್ದಲು ಪೂರೈಕೆ:ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ 2004ರಿಂದ 2014ರ ಅವಧಿಯಲ್ಲಿ 725 ಲಕ್ಷ ಮೆಟ್ರಿಕ್​ ಟನ್​ ಕಲ್ಲಿದ್ದಲು ರಾಜ್ಯಕ್ಕೆ ಪೂರೈಕೆಯಾಗಿತ್ತು. ಆದರೆ, 2015 ರಿಂದ 2022ರ ಅವಧಿಯಲ್ಲಿ 792 ಲಕ್ಷ ಮೆಟ್ರಿಕ್​ ಟನ್​ ಕಲ್ಲಿದ್ದಲು ಪೂರೈಕೆಯಾಗಿದೆ. ರಾಜ್ಯದ ವಿದ್ಯುತ್​ ಹಿತಾಸಕ್ತಿ ಕಾಪಾಡುವುದಕ್ಕೆ ಅಗತ್ಯ ಮೂಲಸೌಕರ್ಯ ಹಾಗೂ ಕಲ್ಲಿದ್ದಲು ಪೂರೈಕೆಯಲ್ಲಿ ಕೇಂದ್ರದ ನರೇಂದ್ರ ಮೋದಿ ಸರಕಾರ ಹಿಂದೆ ಬಿದ್ದಿಲ್ಲ ಎಂದು ಹೇಳಿದರು.
ಕತ್ತಲೆ ಭಾಗ್ಯದ ದಿನ ಜನ ಮರೆತಿಲ್ಲ:ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜ್ಯಕ್ಕೆ ನೀಡಿದ್ದ ಕತ್ತಲೆ ಭಾಗ್ಯದ ರ್ದುದಿನಗಳನ್ನು ಸಾರ್ವಜನಿಕರು ಇನ್ನೂ ಮರೆತಿಲ್ಲ. ಅಪಪ್ರಚಾರ ನಡೆಸುವಾಗ ಕಾಂಗ್ರೆಸಿಗರು ಹತ್ತು ಬಾರಿ ಯೋಚಿಸಿ ಅಡಿ ಇಡಲಿ ಎಂದು ವ್ಯಂಗ್ಯವಾಡಿದರು.
ಗ್ರಾಮಕ್ಕೆ ನೀರು, ರಸ್ತೆ ಕೊಡಿ ಎಂದ ಯುವಕನಿಗೆ ಶಾಸಕರಿಂದ ಕಪಾಳಮೋಕ್ಷ: ಆತ ಕೆಟ್ಟ ಪದ ಬಳಸಿದ, ಅದ್ಕೆ ಬುದ್ಧಿ ಹೇಳ್ದೆ…

ಅಪಘಾತದಲ್ಲಿ ಟಿ.ಬಿ.ಜಯಚಂದ್ರಗೆ ಗಾಯ: ಮಾಜಿ ಸಚಿವರ ಆರೋಗ್ಯ ಸ್ಥಿತಿ ಹೇಗಿದೆ? ಆಸ್ಪತ್ರೆಯಿಂದಲೇ ವಿಡಿಯೋ ಬಿಡುಗಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 4 =
Remember me
