ಮಂಗಳೂರು:ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು- ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಬೆಳ್ಳಾರೆಯಲ್ಲಿ ಬುಧವಾರ ನಡೆದ ವಿವಿಧ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಭೆ ಹಿನ್ನೆಲೆ ಮಂಗಳೂರಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅಲೋಕ್​ ಕುಮಾರ್, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈಗಾಗಲೇ ಏಳು ಮಂದಿಯನ್ನು ಬಂಧಿಸಲಾಗಿದೆ. ಇವರ ವಿರುದ್ಧ ಹತ್ಯೆಗೆ ಸಂಚು ರೂಪಿಸಿದ ಆರೋಪ ಇದೆ. ಇವರನ್ನು ಸಂಬಂಧಿಸಿದ ಸ್ಥಳಗಳಿಗೆ ಕರೆದುಕೊಂಡು ಹೋಗಿ ಮಹಜರು ನಡೆಸಲಾಗಿದೆ. ಈ ಪ್ರಕರಣದ ಪ್ರಮುಖ ಮೂರು ಆರೋಪಿಗಳು ತಲೆಮರೆಸಿದ್ದಾರೆ. ಇವರು ಎಲ್ಲಿ ಇದ್ದಾರೆ? ಎಂಬ ಮಾಹಿತಿ ಲಭ್ಯವಾಗಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳಲು ಪದೇಪದೆ ಜಾಗ ಬದಲಾಯಿಸುತ್ತಿರುವ ಮಾಹಿತಿ ಇದೆ. ಇವರು ತಮ್ಮ ಮನೆಯನ್ನೇ ತೊರೆದು ಅಜ್ಞಾತ ಸ್ಥಳಗಳಿಗೆ ತೆರಳಿದ್ದು, ಪತ್ತೆಗೆ ಕಠಿಣ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ. ಆರೋಪಿಗಳಿಗೆ ವಾರಂಟ್ ಜಾರಿ ಮಾಡಿ, ಆಸ್ತಿಮುಟ್ಟುಗೋಲು ಹಾಕಲು ತೀರ್ಮಾನಿಸಲಾಗಿದೆ ಎಂದರು.
ಎನ್‌ಐಎ-ಎಸ್ಪಿಗಳ ಜತೆ ಸಭೆ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡ ಪ್ರಮುಖ ಆರೋಪಿಗಳ ಬಂಧನಕ್ಕೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಮಂಡ್ಯ, ಚಾಮರಾಜನಗರ, ಹಾಸನ, ಶಿವಮೊಗ್ಗ ಮತ್ತಿತರ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಬೆಳ್ಳಾರೆಯಲ್ಲಿ ಸಭೆ ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಕೋರ್ಟ್ ಮೂಲಕ ಪ್ರಮುಖ ಆರೋಪಿಗಳ ಆಸ್ತಿಮುಟ್ಟುಗೋಲು ಸೇರಿದಂತೆ ಮಹತ್ವದ ನಿರ್ಧಾರಗಳ ಜಾರಿಗೆ ಚರ್ಚೆ ನಡೆಸಲಾಗುವುದು. ಇದಲ್ಲದೆ ಆರೋಪಿಗಳ ಪತ್ತೆ ಕಾರ್ಯಾಚರಣೆ ವಿಧಾನವನ್ನು ಪರಿಷ್ಕರಿಸಿ ಮತ್ತಷ್ಟು ಸವಾಲಿನಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗುವುದು. ಈ ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಲ್ಲದೆ, ಕೇಂದ್ರ ತನಿಖಾ ಏಜೆನ್ಸಿ(ಎನ್‌ಐಎ) ಅಧಿಕಾರಿಗಳೂ ಭಾಗವಹಿಸುತ್ತಿದ್ದಾರೆ ಎಂದು ಅಲೋಕ್ ಕುಮಾರ್ ಹೇಳಿದರು.
ಆಷಾಢ ಹಿನ್ನೆಲೆ ತವರಿಗೆ ಬಂದಾಕೆ ದುರಂತ ಅಂತ್ಯ: ಆ ಒಂದು ತಿಂಗಳಲ್ಲಿ ಆಗಬಾರದ್ದೆಲ್ಲಾ ಆಗಿ ಹೋಯ್ತು…

ಚಾಮರಾಜನಗರ ಉಪನ್ಯಾಸಕಿ ದುರಂತ ಅಂತ್ಯ: ಗೊಂದಲದ ಗೂಡಿಗೆ ಸಿಲುಕಿದ ಚಂದನಾ… ಡೆತ್​ನೋಟಲ್ಲಿದೆ ಸಾವಿನ ಕಾರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 12 =
Remember me
