ಮಂಗಳೂರು:ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದು, ಈವರೆಗೆ ಬಂಧಿತರ ಸಂಖ್ಯೆ 10ಕ್ಕೇರಿದೆ.
ಶಿಯಾಬುದ್ದೀನ್​ ಅಲಿ(33), ಎಲಿಮಲೆಯ ಬಶೀರ್(29) ಮತ್ತು ರಿಯಾಜ್(27) ಬಂಧಿತ ಆರೋಪಿಗಳು. 15 ದಿನಗಳಿಂದ ಪದೇಪದೆ ಜಾಗ ಬದಲಿಸುತ್ತಾ ತಲೆಮರೆಸಿಕೊಂಡಿದ್ದ ಆರೋಪಿಗಳನ್ನ ತಲಪಾಡಿ ಚೆಕ್ ಪೋಸ್ಟ್​ನಲ್ಲಿ ಗುರುವಾರ ಬೆಳಗ್ಗೆ ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ವಾಹನ ಹಾಗೂ ಆಯುಧಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ವಿವರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಲೋಕ್​ ಕುಮಾರ್​, ಪ್ರಕರಣಗಳಲ್ಲಿ ಸಂಚು ರೂಪಿಸಿದ ಹಾಗೂ ಸಹಕಾರ ನೀಡಿದ ಒಟ್ಟು 7 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಮುಖ ಆರೋಪಿಗಳ ಬಂಧನ ಸೇರಿದಂತೆ ಒಟ್ಟು ಹತ್ತು ಮಂದಿಯ ಬಂಧನವಾಗಿದೆ. ಇನ್ನೂ ತನಿಖೆ ಮುಂದುವರಿದಿದ್ದು ಹತ್ಯೆಗೆ ಹಾಗೂ ಆರೋಪಿಗಳ ರಕ್ಷಣೆಗೆ ಸಹಕಾರ ನೀಡಿದವರ ಬಂಧನವಾಗಲಿದೆ ಎಂದಿದ್ದಾರೆ.
ಪ್ರವೀಣ್​ ಕೊಲೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳು ಪದೇಪದೆ ತಮ್ಮ ವಾಸ ಸ್ಥಾನ ಬದಲಿಸುತ್ತಿದ್ದರು. ವಿಶೇಷ ತಂಡ ರಚಿಸಿ ಅವರನ್ನು ಬಂಧಿಸಲಾಗಿದೆ. ಆರೋಪಿಗಳನ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಕೃತ್ಯಕ್ಕೆ ಬಳಸಿದ ವಸ್ತುಗಳನ್ನ ವಶಕ್ಕೆ ಪಡೆದ ಬಳಿಕ ತನಿಖೆಯನ್ನು ಎನ್​ಐಎಗೆ ಹಸ್ತಾಂತರಿಸಲಾಗುವುದು ಎಂದು ವಿವರಿಸಿದ್ದಾರೆ.
ಘಟನೆ ಹಿನ್ನೆಲೆ ಏನು?:ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಪ್ರವೀಣ್​ ನೆಟ್ಟಾರ್​ರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಕಾನೂನು- ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ನಿನ್ನೆ(ಆ.10) ಘೋಷಿಸಿದ್ದರು.
ಕುಂದಾಪುರದಲ್ಲಿ ದೇವಸ್ಥಾನಕ್ಕೆ ಕನ್ನ ಹಾಕಲು ಹಾಡಹಗಲೇ ಬಂದು ಸಿಕ್ಕಿಬಿದ್ದ ದಂಪತಿಯ ಮದ್ವೆ ರಹಸ್ಯ ಬಯಲು!

ಆಷಾಢ ಹಿನ್ನೆಲೆ ತವರಿಗೆ ಬಂದಾಕೆ ದುರಂತ ಅಂತ್ಯ: ಆ ಒಂದು ತಿಂಗಳಲ್ಲಿ ಆಗಬಾರದ್ದೆಲ್ಲಾ ಆಗಿ ಹೋಯ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − two =
Remember me
