ಬೆಂಗಳೂರು:ಗುತ್ತಿಗೆ ಆಧಾರದಲ್ಲಿ ಸಿ ಗ್ರೂಪ್​ ಹುದ್ದೆ ನೀಡಿದ್ದಕ್ಕಾಗಿ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ರಾಜ್ಯ ಸರ್ಕಾರ ಮತ್ತು ಬಿಜೆಪಿ ಪಕ್ಷಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
ಅರಮನೆ ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪಕ್ಷದ ಕಾರ್ಯಕಾರಿಣಿ ಸಭೆಗೆ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ನೂತನಕುಮಾರಿ, ಕೆಲ ಸಮಯ ಚರ್ಚಿಸಿದರು.
2022ರ ಜುಲೈ 26ರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಪ್ರವೀಣ್​ ನೆಟ್ಟಾರ್​ರನ್ನು ದುಷ್ಖರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು. ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಇವರ ಹತ್ಯೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಪ್ರವೀಣ್​ ಕುಟುಂಬದ ಬೆನ್ನಿಗೆ ನಾವಿದ್ದೇವೆ ಎಂದು ಸಿಎಂ ಆ ವೇಳೆ ಅಭಯ ನೀಡಿದ್ದರು. ಅದರಂತೆ ಪ್ರವೀಣ್​ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡುವುದಾಗಿ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಮಹತ್ವದ ಘೋಷಣೆ ಮಾಡಿದ್ದರು. ಸೆ.29ರಂದು ಪ್ರವೀಣ್​ ಪತ್ನಿಗೆ ಉದ್ಯೋಗ ನೀಡಿ ಬೊಮ್ಮಾಯಿ ಆದೇಶ ಹೊರಡಿಸಿದ್ದರು.
ಗುತ್ತಿಗೆ ಆಧಾರದಲ್ಲಿ ಗ್ರೂಪ್​ ಸಿ ಹುದ್ದೆ ನೀಡಿ ಆತ್ಮಸ್ಥೈರ್ಯ ತುಂಬುವ ಜತೆಗೆ ಕಷ್ಟಕ್ಕೆ ಸ್ಪಂದಿಸಿದ ಸಿಎಂಗೆ ನೂತನಕುಮಾರಿ ಕೃತಜ್ಞತೆ ಸಲ್ಲಿಸಿದರು. ಧೈರ್ಯದಿಂದ ಭವಿಷ್ಯದ ಜೀವನವನ್ನು ನಿರ್ವಹಿಸಬೇಕು ಎಂದು ಬೊಮ್ಮಾಯಿ ಧೈರ್ಯ ತುಂಬಿದ್ದಾರೆ.
ನಮಗೂ ರಾಜಕೀಯ ಮಾಡೋಕೆ ಬರುತ್ತೆ… ಇಡಿ ಕಚೇರಿಯಿಂದ ಹೊರ ಬರುತ್ತಿದ್ದಂತೆ ಸಿಡಿದೆದ್ದ ಡಿಕೆಶಿ

ಲವ್​ ಜಿಹಾದ್​ ಬಲೆಗೆ ಕನ್ನಡದ ನಟಿ? ಕಣ್ಣೀರಿಟ್ಟು ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ದಿವ್ಯಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
