ರಾಯಚೂರು:ಮೂರು ತಿಂಗಳ ಗರ್ಭಿಣಿಗೂ ಕರೊನಾ ಸೋಂಕು ತಗುಲಿದ್ದು, ಐಸೋಲೇಷನ್ ವಾರ್ಡ್​ನಲ್ಲಿದ್ದ ಇವರಿಗೆ ಭಾನುವಾರ ರಕ್ತಸ್ರಾವ ಕಾಣಿಸಿಕೊಂಡಿತ್ತು. ಆದರಿಂದು (ಮಂಗಳವಾರ) ಗರ್ಭಪಾತವಾಗಿದೆ.
ಇಲ್ಲಿನ ಓಪೆಕ್ ಕೋವಿಡ್ ಆಸ್ಪತ್ರೆಯಲ್ಲಿದ್ದ ಗರ್ಭಿಣಿಗೆ ನಿನ್ನೆ(ಭಾನುವಾರ) ರಕ್ತಸ್ರಾವ ಕಾಣಿಸಿಕೊಂಡು ನೋವಿನಿಂದ ನರಳುತ್ತಿದ್ದರೂ ಚಿಕಿತ್ಸೆ ನೀಡುತ್ತಿಲ್ಲ ಎಂದು ಐಸೋಲೇಷನ್ ವಾರ್ಡ್​ನಲ್ಲಿದ್ದ ರೋಗಿಗಳು ಮಧ್ಯಾಹ್ನ ಊಟ ಬಿಟ್ಟು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಸಮಯಕ್ಕೆ ಸರಿಯಾಗಿ ಊಟ ನೀಡುತ್ತಿಲ್ಲ ಎಂದು ಆರೋಪಿಸಿ ಆಸ್ಪತ್ರೆ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಇದನ್ನೂ ಓದಿರಿಕರೊನಾ ರೋಗಿಗಳಿಗಿನ್ನು ಮನೆಯೇ ಆಸ್ಪತ್ರೆ; ಜೇಬಿಗೆ ತಕ್ಕಂಥ ಟ್ರೀಟ್​ಮೆಂಟ್​ ಪ್ಯಾಕೇಜ್​
ರೋಗಿಗಳ ಆಕ್ರೋಶಕ್ಕೆ ಮಣಿದು ಗರ್ಭಿಣಿಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಪ್ರಯೋಜನವಾಗಲಿಲ್ಲ. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಕೃಷ್ಣ, ತೀವ್ರ ರಕ್ತಸ್ರಾವದಿಂದ ಗರ್ಭಪಾತವಾಗಿದೆ. ಸೋಂಕಿತ ಮಹಿಳೆ ಚೇತರಿಸಿಕೊಳ್ಳುತ್ತಿದ್ದು, ಯಾವುದೇ ಅಪಾಯವಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿರಿಚಾಮರಾಜನಗರಕ್ಕೂ‌ ಕಂಟಕವಾಯಿತು ಮಹಾ ನಂಟು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 4 =
Remember me
