ಬೆಂಗಳೂರು:ನಕಲಿ ದಾಖಲೆಗಳ ಕುರಿತಂತೆ ಖಾಸಗಿ ವ್ಯಕ್ತಿ ಸಹ ಕ್ರಿಮಿನಲ್ ದೂರು ದಾಖಲಿಸಬಹುದು ಎಂದು ಹೈಕೋರ್ಟ್ ಆದೇಶಿಸಿದೆ. ಪ್ರಕರಣ ಸಂಬಂಧ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ವಾಸಂತಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಹೊರಡಿಸಿದೆ.
ನ್ಯಾಯಪೀಠ ಯಾವ ನ್ಯಾಯಾಲಯದ ಮುಂದೆ ನಕಲಿ ದಾಖಲೆಗಳನ್ನು ಸಲ್ಲಿಸಲಾಗಿದೆಯೋ ಅಂತಹ ವ್ಯಕ್ತಿ ವಿರುದ್ಧ ಕೋರ್ಟ್ ಸಹ ಸಿಆರ್‌ಪಿಸಿ ಸೆಕ್ಷನ್ 340ರಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬಹುದು ಎಂದು ಆದೇಶಿಸಿದೆ. ಸುಪ್ರೀಂಕೋರ್ಟ್ ಬಂಡೇಕರ್ ಬದ್ರರ್ಸ್ ಪ್ರವೈಟ್ ಲಿಮಿಟೆಡ್ ಪ್ರಕರಣದಲ್ಲಿ ಸಿಆರ್‌ಪಿಸಿ 195 ವಿಧಿಸಲು ನಿರ್ಬಂಧವಿದೆ.
ಅದರಂತೆ ಬಾಧಿತ ವ್ಯಕ್ತಿಯು ಕ್ರಿಮಿನಲ್ ಪ್ರಕರಣ ಹೂಡಲು ಅವಕಾಶವಿದೆ. ಜತೆಗೆ ಬಾಧಿತ ವ್ಯಕ್ತಿ ಖಾಸಗಿಯವನಾಗಿದ್ದರೆ ಆತನಿಗೆ ಪೊಲೀಸ್ ಠಾಣೆಯಲ್ಲಿ ಅಥವಾ ಕೋಟ್ ಮುಂದೆ ದೂರು ದಾಖಲಿಸಲು ಖಂಡಿತಾ ಅವಕಾಶವಿದೆ ಎಂದು ಹೇಳಿದೆ. ಪ್ರತಿವಾದಿ ಉಮೇಶ್ ವಿರುದ್ಧದ ಪ್ರಕರಣದಲ್ಲಿ ನಕಲಿ ದಾಖಲೆ ನೀಡಲಾಗಿದೆ.
ಹಾಗಾಗಿ ಅವರಿಗೆ ಕ್ರಿಮಿನಲ್ ಕೇಸ್ ದಾಖಲಿಸಲು ಅವಕಾಶವಿದೆ ಎಂದು ಹೇಳಿರುವ ನ್ಯಾಯಾಲಯ ವಾಸಂತಿ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ. ತೀರ್ಥಹಳ್ಳಿ ತಾಲೂಕಿನ ಗಬಡಿ ಗ್ರಾಮದ ನಿವೇಶನ ಸಂಬಂಧ 2015ರಲ್ಲಿ ವಾಸಂತಿ ವಿರುದ್ಧ ಅದೇ ಗ್ರಾಮದ ಜಿ.ಡಿ. ಉಮೇಶ್ ಸ್ಥಳೀಯ ನ್ಯಾಯಾಲಯದಲ್ಲಿ ಸಿವಿಲ್ ದಾವೆ ದಾಖಲಿಸಿದ್ದರು. ಆಗ ವಾಸಂತಿ ನಕಲಿ ದಾಖಲೆ ಸಲ್ಲಿಸಿದ್ದಾರೆಂದು ಉಮೇಶ್ ಮತ್ತೊಂದು ಕ್ರಿಮಿನಲ್ ಕೇಸ್ ದಾಖಲಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
