ಕಲಬುರಗಿ:ಹಿರಿಯ ಸಾಹಿತಿ ಪ್ರೊ. ವಸಂತ ಕುಷ್ಟಗಿ(86) ಅವರು ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಸಂತ ಕಷ್ಟಗಿ ಕಲಬುರಗಿಯ ನಿವಾಸದಲ್ಲಿ ಕೊನೆಯುಸಿರೆದರು.
1936ರ ಅಕ್ಟೋಬರ್ 10 ರಂದು ಬಾದಾಮಿಯಲ್ಲಿ ಜನಿಸಿದ್ದ ವಸಂತ ಕುಷ್ಟಗಿ ಅವರು ಎಂಎ ಪದವಿ ಪಡೆದ ಬಳಿಕ ಬೀದರಿನ ಟಿ.ವಿ. ಭೂಮರೆಡ್ಡಿ ಕಾಲೇಜು, ಶಹಾಬಾದಿನ ಎಸ್‌ಎಸ್‌ಎಂ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿದ್ದರು. ಬಳಿಕ ಕಲಬುರ್ಗಿಯ ಎಂಎಸ್‌ಐ ಕಾಲೇಜು ಮತ್ತು ಶಹಾಬಾದಿನ ಎಸ್‌ಎಸ್‌ಎಂ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿ ನಂತರವೂ ಸ್ವಾಮಿ ರಾಮಾನಂದ ತೀರ್ಥ ಸಂಶೋಧನ ಸಂಸ್ಥೆಯಲ್ಲಿ ಗೌರವ ನಿರ್ದೇಶಕರಾಗಿ, ಗುಲಬರ್ಗಾ ವಿ.ವಿ ಸ್ಥಾಪನೆಯಾದಾಗ(1980-82) ಉಪಕುಲಪತಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ವಸಂತ ಕುಷ್ಟಗಿ ಅವರಿಗೆ ತಾಯಿ ಸುಂದರಾಬಾಯಿ ಅಕ್ಷರಾಭ್ಯಾಸ ಮಾಡಿಸಿದರೆ, ತಂದೆ ರಾಘವೇಂದ್ರ ಕುಷ್ಟಗಿ ಅವರು ರು ಸಾಹಿತ್ಯದತ್ತ ಒಲವು ಮೂಡಿಸಿದ್ದರು. 5ನೇ ತರಗತಿ ವಿದ್ಯಾರ್ಥಿ ಆಗಿದ್ದಾಗಲೇ ವಸಂತ ಕುಷ್ಟಗಿ ಅವರು ‘ನನ್ನ ಮನೆ ಹಾಲಕೆನೆ’ ಎಂಬ ಕವಿತೆಯನ್ನು ಬರೆದಿದ್ದರು. ಇವರ ಮೊದಲ ಕವನ ಸಂಕಲನ ‘ಭಾವದೀಪ್ತಿ’. ಇವರ ಮೊದಲ ಕೃತಿ ಭಕ್ತಿಗೋಪುರ. ವ್ಯಕ್ತಿ ಚಿತ್ರ ಕೃತಿಗಳು, ದಾಸ ಸಾಹಿತ್ಯದ ಕೃತಿಗಳು, ಸಾಹಿತ್ಯ ಪರಿಚಯಾತ್ಮಕ ಕೃತಿ, ನಾಟಕಗಳ ರಚನೆ ಮಾತ್ರವಲ್ಲದೆ, ಕೃತಿ ಸಂಪಾದನೆಯ ಕಾರ್ಯದಲ್ಲಿಯೂ ತೊಡಗಿಸಿಕೊಂಡಿದ್ದರು.
ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕಡೆಂಗೋಡ್ಲು ಕಾವ್ಯ ಪ್ರಶಸ್ತಿ, ಗೊರೂರು ಸಾಹಿತ್ಯ ಪ್ರಶಸ್ತಿ, ವಾರಂಬಳ್ಳಿ ಪ್ರಶಸ್ತಿ, ರತ್ನಾಕರವರ್ಣಿ ಮುದ್ದಣ– ಆನಾಮಿಕ ದತ್ತಿ ಪ್ರಶಸ್ತಿ, ಭಾರತ ರತ್ನ ಸರ್ ಎಂ.ವಿ. ಪ್ರತಿಷ್ಠಾನ ಪ್ರಶಸ್ತಿ, ಉಡುಪಿ ಜಿಲ್ಲೆಯ ಬೇಲಾಡಿ ಮಾರಣ್ಣ ಮಾಡ ಪ್ರಶಸ್ತಿ ಸೇರಿದಂತೆ ಹಲವು ಗೌರವ ವಸಂತ ಕುಷ್ಟಗಿ ಅವರ ಮುಡಿಗೇರಿದೆ.
ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸಜೀವ ದಹನ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
