ಬೆಂಗಳೂರು:‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಹೈಟೆನ್ಷನ್​ ವಿದ್ಯುತ್​ ತಂತಿ ತಗುಲಿ ಫೈಟ್​ ಅಸಿಸ್ಟೆಂಟರ್​ ವಿವೇಕ್​(35) ಮೃತಪಟ್ಟಿದ್ದಾನೆ. ಈ ಸಂಬಂಧ ಮೃತನ ಕುಟುಂಬಸ್ಥರು ಇದುವರೆಗೂ ದೂರು ಕೊಟ್ಟಿಲ್ಲ. ಆದರೆ ಪೊಲೀಸರು ಸುಮೊಟೋ ಕೇಸ್​ ದಾಖಲಿಸಿದ್ದು, ಪ್ರಕರಣ ಸಂಬಂಧ ಸಿನಿಮಾ ನಿರ್ದೇಶಕ, ಫೈಟ್ ಮಾಸ್ಟರ್ ಮತ್ತು ಕ್ರೇನ್ ಆಪರೇಟರ್ ಸೇರಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅತ್ತ ಈ ಪ್ರಕರಣದ A2 ಆರೋಪಿ, ನಿರ್ಮಾಪಕ ಗುರುದೇಶಪಾಂಡೆ ತಲೆ ಮರೆಸಿಕೊಂಡಿದ್ದಾರೆ. ಘಟನೆ ನಡೆದ ದಿನ ಪೊಲೀಸ್​ಗೆ ದೂರು ಕೊಡ್ತೀವಿ ಎಂದು ಮೃತನ ಕುಟುಂಬಸ್ಥರು ಹೇಳಿದ್ದರು. ಆದರೆ ಇದುವರೆಗೂ ಕೊಟ್ಟಿಲ್ಲ.
ವಿವೇಕ್​ರ ಮರಣೋತ್ತರ ಪರೀಕ್ಷೆ ನಡೆದಿದ್ದು, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇಂದು(ಮಂಗಳವಾರ) ಸಂಜೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಈ ನಡುವೆ ತಲೆ ಮರೆಸಿಕೊಂಡಿರುವ ನಿರ್ಮಾಪಕ ಗುರುದೇಶಪಾಂಡೆ, ವಿವೇಕ್​ರ ಚಿಕ್ಕಪ್ಪನಿಗೆ ಕರೆ ಮಾಡಿ ಮೃತ ವಿವೇಕ್ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೊಡ್ತೀವಿ ಎಂದಿದ್ದಾರೆ.
ಕಾನ್ಫರೆನ್ಸ್ ಕಾಲ್ ಹಾಕಿ ವಿವೇಕ್​ರ ಇಬ್ಬರೂ ಚಿಕ್ಕಪ್ಪಂದಿರೊಂದಿಗೆ ಮಾತನಾಡಿದ ಗುರುದೇಶಪಾಂಡೆ, 10 ಲಕ್ಷ ರೂಪಾಯಿ ನೆರವು ಕೊಡುವುದಾಗಿ ಹೇಳಿದ್ದಾರೆ ಎಂದು ಮೃತನ ಚಿಕ್ಕಪ್ಪ ತಿಳಿಸಿದ್ದಾರೆ.
ಈ ಘಟನೆಗೆ ಕ್ರೇನ್ ಆಪರೇಟರ್​ದ್ದೇ ತಪ್ಪು. ಗುರುದೇಶಪಾಂಡೆ ಅವರು 10 ಲಕ್ಷ ರೂ. ಪರಿಹಾರ ಕೊಡ್ತೀನಿ ಅಂದಿದ್ದಾರೆ‌ ಎಂದು ವಿವೇಕ್​ರ​ ಚಿಕ್ಕಮ್ಮ ರಾಜಮಾಣಿಕಂ ಹೇಳಿದ್ದಾರೆ.
‘ಲವ್ ಯು ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ನಡೆದ ದುರಂತ ಕುರಿತು ಪ್ರತಿಕ್ರಿಯಿಸಿದ ರಾಮನಗರ ಎಸ್ಪಿ ಎಸ್.ಗಿರೀಶ್, ನಿರ್ಮಾಪಕ ಸ್ಥಳದಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ಜಮೀನು ಮಾಲೀಕ ರೈತ, ಆತನಿಗೆ ಏನು ವಿಷಯ ಗೊತ್ತಿರಲ್ಲಿಲ್ಲ. ಆದರೆ, ಚಿತ್ತೀಕರಣಕ್ಕೆ ಅನುಮತಿ ಪಡೆಯಬೇಕಿತ್ತು. ನಿರ್ದೇಶಕ ಕೂಡ ಅನುಮತಿ ಪಡೆಯಬೇಕಿತ್ತು, ಪಡೆದಿಲ್ಲ. ನಿನ್ನೆ ತಡರಾತ್ರಿವರೆಗೆ ಮೃತರ ಪೋಷಕರು ದೂರು ಕೊಡಲು ಮುಂದಾಗಲಿಲ್ಲ. ಕಾಂಪ್ರಮೈಸ್ ಆಗುವ ಸೂಚನೆಯಿತ್ತು, ಹಾಗಾಗಿ ಸುಮೊಟೋ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ ಎಂದರು.
ಅಮ್ಮನ ಮಾತು ಕೇಳಿದ್ದರೆ ವಿವೇಕ್​ ಸಾಯುತ್ತಲೇ ಇರಲಿಲ್ಲ..! ಮುಗಿಲುಮುಟ್ಟಿದೆ ಹೆತ್ತವ್ವನ ಆಕ್ರಂದನ

ನನ್ನ ತಾಯಾಣೆ.. ಅಷ್ಟೊಂದು ಹಣವನ್ನು ಜೀವನದಲ್ಲಿ ನೋಡಿಯೇ ಇರಲಿಲ್ಲ: ಮಂಜು ಪಾವಗಡ

ದುರಂತ ನಡೆದಾಗ ಅಲ್ಲೇ ಇದ್ದೆ, ತಕ್ಷಣ ನನಗೂ ಓಡಲು ಆಗಲಿಲ್ಲ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಅಜಯ್ ರಾವ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − one =
Remember me
