ಬೆಂಗಳೂರು:ಮಂಗಳೂರು ಮತ್ತು ಗೋವಾ ವಿಶ್ವವಿದ್ಯಾಲಯಗಳ ವಿಶ್ರಾಂತ ಕುಲಪತಿ, ಇತಿಹಾಸ ತಜ್ಞ, ಶಿಕ್ಷಣ ತಜ್ಞ ಪ್ರೊ.ಬಿ.ಷೇಕ್ ಅಲಿ ಅವರು ಗುರುವಾರ ನಿಧನರಾದರು.
ಹಾಸನ ಜಿಲ್ಲೆಯ ಬೆಳಗೋಡು ಮೂಲದ ಪ್ರೊ.ಷೇಕ್ ಅಲಿ ಅವರು ಮೈಸೂರಿನ ಸರಸ್ವತಿಪುರಂನಲ್ಲಿ ವಾಸವಿದ್ದರು. ಇವರಿಗೆ 98 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಇವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಕೊನೆಯುಸಿರೆಳೆದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಆನರ್ಸ್‌ ಪದವಿ ಹಾಗೂ ಆಲಿಘರ್‌ ಮುಸ್ಲಿಂ ವಿವಿಯಿಂದ ಪಿಎಚ್‌ಡಿ ಪಡೆದಿದ್ದರು. ಮೈಸೂರು ವಿವಿಯಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಇವರು ಉರ್ದು, ಇಂಗ್ಲಿಷ್, ಫ್ರೆಂಚ್ ಭಾಷೆ ಮೇಲೆ ಹಿಡಿತ ಸಾಧಿಸಿದ್ದರು. ಕನ್ನಡ ವಿವಿ ಪ್ರಕಟಿಸಿರುವ ‘ಕರ್ನಾಟಕ ಇತಿಹಾಸದ ಏಳು ಸಂಪುಟಗಳು’ ಪ್ರಧಾನ ಸಂಪಾದಕರಾಗಿದ್ದರು.
ಇವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ‘ಸುವರ್ಣ ಮಹೋತ್ಸವ ಪ್ರಶಸ್ತಿ’, ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ. ಪ್ರೊ.ಷೇಕ್​ ಅಲಿ ಅವರ ನಿಧನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿಂದತೆ ಹಲವು ಅಂತಾಪ ಸೂಚಿಸಿದ್ದಾರೆ.
ಮಂಗಳೂರು ಮತ್ತುಗೋವಾ ವಿಶ್ವವಿದ್ಯಾಲಯಗಳ ಕುಲಪತಿಗಳಾಗಿದ್ದ ಪ್ರಖ್ಯಾತ ಇತಿಹಾಸ ತಜ್ಞ, ಪ್ರೊ.ಬಿ.ಷೇಕ್ ಅಲಿ ಅವರ ನಿಧನ ತುಂಬಿಬಾರದ ನಷ್ಟ.ಅವರ ಆತ್ಮಕ್ಕೆ ಶಾಂತಿ ಕೋರುವೆ.
ಪ್ರೊ.ಷೇಕ್ ಅಲಿ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.pic.twitter.com/Mm5PCGSGPC
— Siddaramaiah (@siddaramaiah)September 1, 2022

ಕಾಂಗ್ರೆಸ್​ಗೆ ಮುದ್ದಹನುಮೇಗೌಡ ರಾಜೀನಾಮೆ! ಡಿಕೆಶಿ-ಸಿದ್ದು ಜತೆ ಮಾತುಕತೆ ನಡೆಸಿ ಮಹ್ವತ್ವದ ನಿರ್ಧಾರ ಪ್ರಕಟಿಸಿದ ಎಸ್​ಪಿಎಂ

ಮಳೆಯಿಂದ ಮಂಡ್ಯದಲ್ಲಿ ಬಯಲಾಯ್ತು ಭಯಾನಕ ರಹಸ್ಯ! ಸ್ನಾನದ ಕೋಣೆಯಲ್ಲಿ ಸುರಂಗ… ಮಾಲೀಕನಿಗೆ ಕಾದಿತ್ತು ಶಾಕ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 4 =
Remember me
