ಬೆಂಗಳೂರು:ಸಮಸ್ತ ಹಿಂದೂಗಳನ್ನು ಒಗ್ಗೂಡಿಸುವ ಕಾರ್ಯಕ್ರಮವಾಗಬೇಕಾಗಿದ್ದ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮ ಬಿಜೆಪಿಯ ರಾಜಕೀಯದಿಂದಾಗಿ ಹಿಂದೂಗಳನ್ನು ಒಡೆಯುವ ಕಾರ್ಯಕ್ರಮವಾಗಿರುವುದು ದುರಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಖ್ಯಾನಿಸಿದ್ದಾರೆ.ಅವಸರದಿಂದ ಅಪೂರ್ಣ ಸ್ಥಿತಿಯಲ್ಲಿರುವ ರಾಮಮಂದಿರವನ್ನು ಉದ್ಘಾಟಿಸಿ ಈ ಮೂಲಕ ಹಿಂದುತ್ವದ ಅಲೆಯನ್ನು ಬಡಿದೆಬ್ಬಿಸಿ ಅದರ ಮರೆಯಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕುವ ಮೋದಿ ಪ್ರಯತ್ನ ನಡೆಸಿದ್ದಾರೆ ಎಂದು ಕುಟುಕಿದ್ದಾರೆ.ರಾಮಮಂದಿರದಲ್ಲಿ ಶೈವರು-ಶಾಕ್ತರಿಗೆ ಅಧಿಕಾರ ಇಲ್ಲ ಎಂಬ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿಯವರ ಹೇಳಿಕೆ ವಿವಾದ ಸೃಷ್ಟಿಸಿದೆ. ಇದು ನಿಜವೆಂದಾದರೆ ಇದು ಸಮಸ್ತ ಶೈವ ಆರಾಧಕರಿಗೆ ಮಾಡಿರುವ ಅವಮಾನವಾಗಿದೆ ಎಂದು ಹೇಳಿದ್ದಾರೆ.ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನ ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರಮೋದಿ ಅವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ಚೌದರಿ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಅಲ್ಲದೇ ಶ್ರದ್ಧಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ ಎಂದು ಆರೋಪಿಸಿದರು.ರಾಮಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡಿದ್ದೆವು. ಇದರ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರಿಲ್ಲ. ಮುಸ್ಲಿಂ ಬಾಂಧವರು ಕೂಡಾ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಂಡು ನ್ಯಾಯಾಂಗದ ಮೇಲಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ. ಆದರೆ ರಾಮಜನ್ಮಭೂಮಿ ವಿವಾದ ಧಾರ್ಮಿಕ ಶ್ರದ್ಧೆಯ ಪ್ರಶ್ನೆ, ಅದು ನ್ಯಾಯಾಲಯದಲ್ಲಿ ತೀರ್ಮಾನ ಮಾಡುವಂತಹದ್ದಲ್ಲ ಎಂದು ಹೇಳಿಕೊಂಡು ಬಂದಿದ್ದ ಬಿಜೆಪಿ ಮತ್ತು ಆರ್‌ಎಸ್‌ಎಸ್, ವಿಶ್ವಹಿಂದೂ ಪರಿಷತ್ ಮೊದಲಾದ ಸಂಘಟನೆಗಳು ಸುಪ್ರೀಂಕೋರ್ಟ್ ತೀರ್ಪು ತಮ್ಮ ಪರವಾಗಿ ಹೊರಬಿದ್ದ ಕೂಡಲೇ ಅದನ್ನು ಒಪ್ಪಿಕೊಂಡಿರುವುದು ಈ ಸಂಘಟನೆಗಳ ನಾಯಕರ ಹಿಪಾಕ್ರಟಿಕ್ ನಡವಳಿಕೆಗೆ ಸಾಕ್ಷಿ ಎಂದು ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದರು.ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ. ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ ಎಂದರು.ಬಿಜೆಪಿಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ. ಶ್ರೀರಾಮಚಂದ್ರ ಇಲ್ಲಿ ಇಲ್ಲವೇ, ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 1 =
Remember me
