ತುಮಕೂರು:ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮೃತಪಟ್ಟಿರುವ ಆರೋಪ ಕೇಳಿಬಂದಿದ್ದು, ಮೃತಳ ಕುಟುಂಬಸ್ಥರು ಮತ್ತು ಸಂಬಂಧಿಕರು ಆಸ್ಪತ್ರೆ ಬಳಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಮುಂಭಾಗ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ವಾಹನ ಸಂಚಾರ ತಡೆದು ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕುಣಿಗಲ್​ ತಾಲೂಕಿನ ತೆರದಕುಪ್ಪೆ ಗ್ರಾಮದ ಪಲ್ಲವಿ ಮೃತರು. ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ತುಂಬು ಗರ್ಭಿಣಿ ಪಲ್ಲವಿ ಜು.6ರಂದು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. 7ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಪಲ್ಲವಿ‌‌ಗೆ ಹೆರಿಗೆ ವೇಳೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ಈ ಬಗ್ಗೆ ವೈದ್ಯರು ಪಲ್ಲವಿಯ ಪೋಷಕರಿಗೆ ಮಾಹಿತಿ ನೀಡಿರಲಿಲ್ಲ ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಆದಿ ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯದ ಸ್ಥಿತಿ ಗಂಭೀರವಾದ ಹಿನ್ನೆಲೆ ಬೆಂಗಳೂರಿನ ಸೇವಾ ಆಸ್ಪತ್ರೆಗೆ ಪಲ್ಲವಿಯನ್ನು ಕುಟುಂಬಸ್ಥರು ಕರೆದೊಯ್ದಿದ್ದರು. ಚಿಕಿತ್ಸೆ ಫಲಿಸದೆ ಪಲ್ಲವಿ ನಿನ್ನೆ ರಾತ್ರಿ(ಜು.29) ಮೃತಪಟ್ಟಿದ್ದಾರೆ.
ಪಲ್ಲವಿ ಸಾವಿಗೆ ಕುಣಿಗಲ್ ಸರ್ಕಾರಿ ಆಸ್ಪತ್ರೆ ವೈದ್ಯರೇ ಕಾರಣ ಎಂದು ಆರೋಪಿಸಿ ಮೃತಳ ಕುಟುಂಬಸ್ಥರು ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಪಲ್ಲವಿ ಸಾವಿಗೆ ನ್ಯಾಯ ಬೇಕು ಎಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ‌ ನೀಡಿದ್ದಾರೆ.
ಮೃತಪಟ್ಟ 30 ವರ್ಷದ ಬಳಿಕ ವಿವಾಹ! ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ನಡೆಯಿತು ಪ್ರೇತಗಳ ಮದ್ವೆ

ಮನೆ-ಮನೆಗೂ ತಲಾ 5 ಸಾವಿರ ರೂಪಾಯಿ ದಾನ ಮಾಡ್ತೀನಿ: ಕೆಜಿಎಫ್​ ಬಾಬು ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + nine =
Remember me
