ಬೆಂಗಳೂರು:545 ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣದ ಪ್ರಮುಖ ಆರೋಪಿ ಐಪಿಎಸ್​ ಅಧಿಕಾರಿ ಅಮೃತ್​ ಪೌಲ್​ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನಗರದ 1ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.
ಜು.4ರಂದು ಅಮೃತ್​ ಪೌಲ್​ರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರನ್ನು ಪಿಎಸ್​ಐ ಹುದ್ದೆ ನೇಮಕಾತಿ ಹಗರಣ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.
ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮದ ವಹಿವಾಟು ನೇಮಕಾತಿ ವಿಭಾಗದ ಕಚೇರಿಯಲ್ಲೇ ನಡೆದಿರುವ ಅನುಮಾನ ಆರಂಭದಲ್ಲೇ ದಟ್ಟವಾಗಿತ್ತು. ಪರೀಕ್ಷೆಯಲ್ಲಿ ಅಕ್ರಮ ನಡೆದ ವೇಳೆ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರೇ ಡೀಲ್​ ಕುದುರಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹಾಗಾಗಿ ಮೊದಲ ತಲೆದಂಡ ಎಂಬಂತೆ ಏ.27ರಂದೇ ಅಮೃತ್ ಪೌಲ್ ಅವರನ್ನ ಬೆಂಗಳೂರಿನ ಆಂತರಿಕ ವಿಭಾಗಕ್ಕೆ ಎತ್ತಂಗಡಿ ಮಾಡಲಾಗಿತ್ತು. ಬಳಿಕ ಇದೇ ಪ್ರಕರಣ ಸಂಬಂಧ ಅಮೃತ್​ ಪೌಲ್​ ಈ ಹಿಂದೆ ಮೂರು ಬಾರಿ ಸಿಐಡಿ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದ್ದರು. ಜು.4ರಂದು ನಾಲ್ಕನೇ ಬಾರಿ ವಿಚಾರಣೆಗೆ ಹಾಜರಾದಾಗ ಇವರನ್ನ ಬಂಧಿಸುವ ಮೂಲಕ ಸಿಐಡಿ ಸಂಚಲನ ಮೂಡಿಸಿತ್ತು.
ಹೆಚ್ಚಿನ ವಿಚಾರಣೆ ಸಲುವಾಗಿ ಮೊದಲು 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಅಧಿಕಾರಿಗಳು ಪಡೆದಿದ್ದರು. ಈ ಅವಧಿಗೆ ಜು.12ಕ್ಕೆ ಮುಗಿದಿತ್ತು. ಜು.13ರಂದು ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಅಮೃತ್​ಪೌಲ್ ಜತೆ ಇನ್ನುಳಿದ ನಾಲ್ವರು ಆರೋಪಿಗಳಾದ ಡಿವೈಎಸ್ಪಿ ಶಾಂಕಕುಮಾರ್, ಎಫ್​ಡಿಎ ಹರ್ಷ, ಆರ್​ಎಸ್​ಐ ಶ್ರೀಧರ್ ಹಾಗೂ ಶ್ರೀನಿವಾಸ್ ಎಂಬುವರನ್ನ ಸಿಐಡಿ ಅಧಿಕಾರಿಗಳು ಹಾಜರುಪಡಿಸಿದ್ದರು. ಅಮೃತ್ ಪೌಲ್​ಗೆ 1.36 ಕೋಟಿ ರೂಪಾಯಿ ನೀಡಿರುವುದಾಗಿ ಶಾಂತಕುಮಾರ್ ಬಾಯ್ಬಿಟ್ಟಿದ್ದಾರೆ. ಹೀಗಾಗಿ ಇನ್ನಷ್ಟು ವಿಚಾರಣೆ ನಡೆಸಬೇಕು. 6 ದಿನಗಳ ಕಾಲ ಅಮೃತ್​ ಪೌಲ್​ ಅವರನ್ನ ನಮ್ಮ ಕಸ್ಟಡಿಗೆ ನೀಡಬೇಕು ಎಂಬ ಸಿಐಡಿ ಅಧಿಕಾರಿಗಳ ಮನವಿಯನ್ನ ಪುರಸ್ಕರಿಸಿದ್ದ ಕೋರ್ಟ್​, 3 ದಿನ ಕಸ್ಟಡಿಗೆ ನೀಡಿತ್ತು. ಅಲ್ಲದೆ ಉಳಿದ ನಾಲ್ವರನ್ನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ಇಂದು(ಜು.15) ವಿಚಾರಣೆ ನಡೆಸಿದ ನ್ಯಾಯಾಲಯ, ಅಮೃತ್​ ಪೌಲ್​ ಅವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಪಂಜಾಬ್​ ಮೂಲದ ಅಮೃತ್​ ಪೌಲ್​, 1995ರ ಬ್ಯಾಚ್​ನ ಐಪಿಎಸ್ ಅಧಿಕಾರಿ. 2000-2003ರ ವರೆಗೆ ಉಡುಪಿ ಎಸ್​ಪಿ ಆಗಿ ಕಾರ್ಯ ನಿರ್ವಹಿಸಿದ್ದರು. 2014ರಲ್ಲಿ ಕರ್ನಾಟಕ ವೆಸ್ಟರ್ನ್ ರೇಂಜ್ ಐಜಿಯಾಗಿ ಕೆಲಸ ಮಾಡಿದ ಅಮೃತ್ ಪೌಲ್, 2018ರಲ್ಲಿ ಸೆಂಟ್ರಲ್ ರೇಂಜ್ ಐಜಿಯಾಗಿ ನೇಮಕವಾದರು. 2019ರಲ್ಲಿ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿ ಬಡ್ತಿ ಹೊಂದಿದ್ದರು. ಕರ್ನಾಟಕದ ನೇಕಾತಿಯ ಸಂಪೂರ್ಣ ಜವಾಬ್ದಾರಿ ಇವರದ್ದೇ ಆಗಿತ್ತು. ಒಎಂಆರ್ ಶೀಟ್ ಕೊಠಡಿ ಕೀ ಇವರ ಉಸ್ತುವಾರಿಯಲ್ಲೇ ಇತ್ತು.
ಮೈಸೂರಲ್ಲಿ ಸರ್ಕಾರಿ ನಿವೃತ್ತ ನೌಕರ ಸಜೀವ ದಹನ: ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ?

ಊರಿಗೆ ಹೋಗ್ಬೇಕಿತ್ತು.. ಅದ್ಕೆ ರಸ್ತೆಬದಿ ನಿಂತಿದ್ದ ಬಸ್​ ಓಡಿಸಿಕೊಂಡು ಬಂದೆ… ಈತನ ಮಾತು ಕೇಳಿ ಮಾಲೀಕ ದಿಗ್ಭ್ರಾಂತ

ಮಾಡದ ತಪ್ಪಿಗೆ ಯುವಕ ಬಲಿ, ಪಿಎಸ್​ಐ ಅಮಾನತು: ಮೃತದೇಹದ ಬಳಿ ಸಿಕ್ಕ ಕವರ್​ನಲ್ಲಿದೆ ಮಹತ್ವದ ಸಾಕ್ಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
