ಬೆಂಗಳೂರು:545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಶಾಂತಿಬಾಯಿ ದಂಪತಿ ಕೊನೆಗೂ ಸಿಕ್ಕಿಬಿದ್ದಿದ್ದಾರೆ.
2021ರ ಅಕ್ಟೋಬರ್ 3ರಂದು ನಡೆದ 545 ಎಸ್‌ಐ ನೇಮಕಾತಿಗೆ ರಾಜ್ಯದಲ್ಲಿ 92 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಲಿಖಿತ ಪರೀಕ್ಷೆ ಬಳಿಕ ಅಕ್ರಮ ನಡೆದಿರುವ ಕುರಿತು ದೂರುಗಳು ದಟ್ಟವಾಗಿ ಕೇಳಿಬಂದ ಹಿನ್ನೆಲೆ ಏಪ್ರಿಲ್ 7ರಂದು ಅಕ್ರಮ ಕುರಿತು ಸಿಐಡಿ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದರು. ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳುತ್ತಿದ್ದಂತೆ ಅಕ್ರಮ ಬಗೆದಷ್ಟು ಆಳ ಎಂಬಂತೆ ಬಯಲಾಗುತ್ತಲೇ ಇದೆ. ಅಕ್ರಮದ ಉರುಳು ಪ್ರಮುಖ ಘಟಾನುಘಟಿಗಳನ್ನೇ ಸುತ್ತಿಕೊಂಡಿದೆ. ಈಗಾಗಲೇ ಕಿಂಗ್​ಪಿನ್​, ಏಜೆಂಟ್​, ಮಧ್ಯವರ್ತಿಗಳು, ಅಭ್ಯರ್ಥಿಗಳು ಸೇರಿದಂತೆ ಹಲವರನ್ನ ಸಿಐಡಿ ಬಂಧಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಗಳ ಪಟ್ಟಿಯಲ್ಲಿ ಹೆಸರಿದ್ದ ಶಾಂತಿಬಾಯಿ ಮತ್ತು ಈಕೆಯ ಗಂಡ ಬಸ್ಯಾ ನಾಯಕ್ ತಲೆ ಮರೆಸಿಕೊಂಡಿದ್ದರು. ಒಂದೂವರೆ ತಿಂಗಳಿನಿಂದ ತಲೆ ಮರೆಸಿಕೊಂಡ ಮಹಿಳಾ ಅಭ್ಯರ್ಥಿ ಶಾಂತಿಬಾಯಿ ಕೊನಗೂ ಸಿಕ್ಕಿಬಿದ್ದಿದ್ದಾಳೆ.
ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆ ಬರೆದು ಪಾಸ್ ಆಗಿದ್ದ ಶಾಂತಿಬಾಯಿ ಗಂಡನೊಂದಿಗೆ ಸಿಐಡಿ ಪೊಲೀಸರಿಗೆ ಸಿಗದೆ ಊರುಬಿಟ್ಟಿದ್ದಳು. ನಿರಾವರಿ ಇಲಾಖೆ ಅಸಿಸ್ಟೆಂಟ್ ಇಂಜಿನಿಯರ್ ಮಂಜುನಾಥ್ ಮೇಳಕುಂದಿ ಕಡೆಯ ಅಭ್ಯರ್ಥಿ ಶಾಂತಿಬಾಯಿ. ಸಿಐಡಿ ಅಧಿಕಾರಿಗಳು ಹೈದರಾಬಾದ್​ನಲ್ಲಿ ಗಂಡ-ಹೆಂಡತಿಯನ್ನು ಬಂಧಿಸಿದ್ದಾರೆ.
40 ದಿನದ ಮಗು ಹೊಟ್ಟೆಯಲ್ಲಿ ಭ್ರೂಣ! ಹೊಟ್ಟೆ ಉಬ್ಬರಿಸಿದೆ, ಮೂತ್ರ ವಿಸರ್ಜಿಸುತ್ತಿಲ್ಲ… ಎಂದು ಆಸ್ಪತ್ರೆಗೆ ಹೋದವರಿಗೆ ಶಾಕ್​

PSI ಎಕ್ಸಾಂಗೂ ಮೊದಲೇ ಆಯ್ಕೆ ಪಟ್ಟಿ ಸಿದ್ಧವಾಗಿತ್ತು! ಈ ಬಾರಿ ಕೆಲಸ ಆಗದವರಿಗೆ ಮುಂದಿನ ಬ್ಯಾಚ್​ನಲ್ಲಿ ನೌಕರಿ…

80 ಲಕ್ಷ ರೂ.ಗೆ PSI ಹುದ್ದೆ ಡೀಲ್​! ಅಕ್ರಮಕ್ಕೆ ದಾರಿ ತೋರಿಸಿದ ಗೆಳೆಯನಿಂದಲೇ ಸ್ಫೋಟಕ ರಹಸ್ಯ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 4 =
Remember me
