ಬೆಂಗಳೂರು:ಪಿಎಸ್​ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣ ದಿನ ದಿನಕ್ಕೂ ಸ್ಫೋಟಕ ತಿರುವು ಪಡೆಯುತ್ತಿದ್ದು, ಇದೀಗ ಸಿಐಡಿ ಅಧಿಕಾರಿಗಳು ಶಿರಸಿ ಮೂಲದ 62 ವರ್ಷದ ಗಣಪತಿ ಭಟ್​ ಎಂಬುವರನ್ನ ವಶಕ್ಕೆ ಪಡೆದಿದ್ದಾರೆ.
ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದರು. ಈ ಹಿನ್ನೆಲೆ ಹಾಜರಾದ ಗಣಪತಿ ಭಟ್, ವಿಚಾರಣೆ ಎದುರಿಸುತ್ತಿದ್ದಾರೆ. ಅತ್ತ ಈ ಗಣಪತಿ ಭಟ್​ರನ್ನು ಗೃಹ ಸಚಿವ ಆರಗ ಜ್ಞಾನೇಂದ್ರರ ಆಪ್ತ ಸಹಾಯಕ ಎಂಬ ಗುಸುಗುಸು ವ್ಯಾಪಕವಾಗಿ ಹರಡಿತ್ತು. ಪಿಎಸ್​ಐ ಹುದ್ದೆ ಹಗರಣದಲ್ಲಿ ಗೃಹ ಸಚಿವರ ಆಪ್ತ ಸಹಾಯಕನ ಕೈವಾಡವಿದೆ, ಗೃಹ ಸಚಿವರಿಗೂ ಸಂಕಷ್ಟ ಎದುರಾಗಬಹುದು ಎಂಬ ಬಿಸಿಬಿಸಿ ಚರ್ಚೆ ಸಾರ್ವಜನಿಕ ವಲಯದಲ್ಲಿ ಶುರುವಾಗಿತ್ತು.
ಅಷ್ಟರಲ್ಲಿ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ ಗೃಹಸಚಿವರು, ಗಣಪತಿ ಭಟ್ ಎನ್ನುವ ಹೆಸರಿನಲ್ಲಿ ನಮ್ಮ ಒಎಸ್​ಡಿ ಇದ್ದಾರೆ. ಇಂದು ಸಿಐಡಿ ವಶಕ್ಕೆ ಪಡೆದಿರುವ ವ್ಯಕ್ತಿ ನಮ್ಮ ಕಾರ್ಯಾಲಯದ ಸಿಬ್ಬಂದಿಯಲ್ಲ. ಈ ಬಗ್ಗೆ ಗೊಂದಲ ಬೇಡ ಎಂದಿದ್ದಾರೆ. ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಶಿರಸಿ ಮೂಲದ ಗಣಪತಿ ಭಟ್​ಗೆ ಪಿಎಸ್​ಐ ಹಗರಣದ ಲಿಂಕ್ ಇದೆ ಎಂಬ ಮಾಹಿತಿ ಸಿಕ್ಕಿದೆ. ಅವರು ಸಾಕಷ್ಟು ವರ್ಗಾವಣೆಯಲ್ಲಿ ತೊಡಗಿದ್ದರು. ಅದನ್ನೇ ವೃತ್ತಿ, ಪ್ರವೃತ್ತಿಯನ್ನಾಗಿಸಿಕೊಂಡಿದ್ದರು. ಹೀಗಾಗಿ ವಿಚಾರಣೆ ನಡೆಸುತ್ತಿದ್ದಾರೆ. ಈ ಅಕ್ರಮದಲ್ಲಿ ಯಾರೇ ಇದ್ದರೂ ಅವರನ್ನ ಬಿಡೋದಿಲ್ಲ ಎಂದರು.
ಇವರು ನಮ್ಮ ಪಕ್ಷದ ಕಾರ್ಯಕರ್ತ, ಇವರ ಕಾರನ್ನು ಹಿಡಿದು ತೊಂದರೆ ಕೊಡಬಾರದು: ಬಿಜೆಪಿ MLA ಶಿಫಾರಸು

ನಿಗಮ ಮಂಡಳಿ ಅಧ್ಯಕ್ಷರಿಗೆ ಬಿಗ್​ ಶಾಕ್! ಬಿಎಸ್​ವೈ ಕಾಲದ ನೇಮಕಾತಿ ರದ್ದು ಮಾಡಿ ರಾಜ್ಯ ಸರ್ಕಾರ​ ಆದೇಶ

ದಾಂಡೇಲಿಯಲ್ಲಿ ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ: ಒಂದೇ ದಿನ 2 ಬಾರಿ ಬಲತ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
