ಬೆಂಗಳೂರು:ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ವಜಾಗೊಳಿಸಿದೆ.
ಕಳಂಕಿತ ಹಾಗೂ ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಈಗಾಗಲೇ ಹೊರಡಿಸಿರುವ ಅಧಿಸೂಚನೆ ಅನುಸಾರವೇ ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಲ್.ಎನ್. ಪವಿತ್ರಾ ಸೇರಿ 28 ಅಭ್ಯರ್ಥಿಗಳು ಕೆಎಟಿ ಮೆಟ್ಟಿಲೇರಿದ್ದರು.
ಅರ್ಜಿ ಕುರಿತು ಸರ್ಕಾರ ಹಾಗೂ ಅಭ್ಯರ್ಥಿಗಳ ಪರ ವಕೀಲರ ವಾದ-ಪ್ರತಿವಾದ ಆಲಿಸಿ, ಕಾಯ್ದಿರಿಸಿದ್ದ ಆದೇಶವನ್ನು ಮಂಗಳವಾರ ಪ್ರಕಟಿಸಿರುವ ಕೆಎಟಿಯ ನ್ಯಾಯಾಂಗ ಸದಸ್ಯ ಟಿ. ನಾರಾಯಣ ಸ್ವಾಮಿ ನೇತೃತ್ವದ ಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆರ್. ಸುಬ್ರಹ್ಮಣ್ಯ, ದೊಡ್ಡ ಮಟ್ಟದಲ್ಲಿ ಹಗರಣ ನಡೆದಿದೆ. ಜತೆಗೆ, ನೇಮಕಾತಿ ಪ್ರಾಧಿಕಾರದ ಮೇಲೆಯೇ ಆರೋಪಗಳಿರುವ ಹಿನ್ನೆಲೆಯಲ್ಲಿ ಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆಗೆ ಆದೇಶಿಸಲಾಗಿದೆ ಎಂದು ವಿವರಿಸಿದ್ದರು. ಸರ್ಕಾರದ ವಾದ ಮಾನ್ಯ ಮಾಡಿರುವ ಕೆಎಟಿ ಅರ್ಜಿ ವಜಾಗೊಳಿಸಿದೆ.
ಅರ್ಜಿದಾರರ ಮನವಿ ಏನಾಗಿತ್ತು?:ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಏ.29ರಂದು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕ ರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಜತೆಗೆ, ಅಂತಿಮ ಪಟ್ಟಿಯು ಈ ಅರ್ಜಿ ಸಂಬಂಧ ಕೆಎಟಿ ಕೈಗೊಳ್ಳುವ ನಿರ್ಧಾರಕ್ಕೆ ಒಳಪಟ್ಟಿರುವಂತೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಬೇಕು ಎಂದು ಮಧ್ಯಂತರ ಮನವಿ ಮಾಡಿದ್ದರು.
ಹನಿಟ್ರ್ಯಾಪ್​ ಕೇಸಲ್ಲಿ ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ: ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದ ಈಕೆ ಹಿನ್ನೆಲೆ ಇಲ್ಲಿದೆ

10 ವರ್ಷದ ಬಳಿಕ ಬಯಲಾಯ್ತು ಮರ್ಯಾದಾ ಹತ್ಯೆ ಪ್ರಕರಣ: ಬಾರ್​ನಲ್ಲಿ ಕುಳಿತು ಕುಡಿದ ನಶೆಯಲ್ಲಿ ಸತ್ಯ ಕಕ್ಕಿದ ಗಂಡ!

ಬೈಕ್​ ಸ್ಕಿಡ್​ ಆಗಿ ವಿದ್ಯಾರ್ಥಿಗಳಿಬ್ಬರ ಸಾವು: ರಜೆ ಹಿನ್ನೆಲೆ ಮುರುಡೇಶ್ವರಕ್ಕೆ ತೆರಳುವಾಗ ಅವಘಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
