ಬೆಂಗಳೂರು:ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಪ್ರಕರಣ ಸಂಬಂಧ ಇಡೀ ಪರೀಕ್ಷೆ ರದ್ದು ಮಾಡಿ ಮರುಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್​ ತಾತ್ಕಾಲಿಕ ತಡೆ ನೀಡಿದೆ.
ಪಿಎಸ್​ಐ ಹುದ್ದೆ ನೇಮಕಾತಿಯಲ್ಲಿನ ಅಕ್ರಮ ಬಯಲಿಗೆ ಬರುತ್ತಿದ್ದಂತೆ ಈ ಮೊದಲು ನಡೆದಿದ್ದ ಪರೀಕ್ಷೆಯನ್ನು ರಸ್ಸು ಮಾಡಿ ಅಂದರೆ ಏ.29ರಂದು ಸರ್ಕಾರ ಆದೇಶ ಹೊರಡಿಸಿತ್ತು. ಯಾರು ಪಿಎಸ್​ಐ ಪರೀಕ್ಷೆ ಬರೆದಿದ್ದರೋ ಅವರಿಗೆ ಮರು ಪರೀಕ್ಷೆ ನಡೆಯುತ್ತೆ. ಆದರೆ, ಆಪಾದಿತರಿಗೆ ಮರು ಪರೀಕ್ಷೆಗೆ ಅವಕಾಶ ಕೊಡಲ್ಲ. ಹಣಕ್ಕಾಗಿ ಹುದ್ದೆ ಎಂಬುದನ್ನು ಮರೆಯಬೇಕು. ತಪ್ಪಿತಸ್ಥರ ವಿರುದ್ಧ ‌ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಸರ್ಕಾರ ಹೇಳಿತ್ತು. ಪಿಎಸ್​ಐ ಹುದ್ದೆಗೆ ಆಯ್ಕೆಯಾಗಿದ್ದ ಹಲವರಿಂದ ಇದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.
ಮರುಪರೀಕ್ಷೆ ನಡೆಸುವ ಕುರಿತು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯಥಿರ್ಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕೋಲಾರದ ಎನ್​.ವಿ. ಚಂದನ್​, ಮೈಸೂರಿನ ಎ.ವಿ. ಚೇತನ್​ ಕುಮಾರ್​ ಸೇರಿ ಆಯ್ಕೆಯಾಗಿದ್ದ 25ಕ್ಕೂ ಅಧಿಕ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್​ ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ ಬುಧವಾರ ವಿಚಾರಣೆ ನಡೆಸಿತು.
ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ವಾದ ಪ್ರತಿವಾದ ಆಲಿಸಿದ ಪೀಠ, ನ್ಯಾಯಾಲಯದ ಮುಂದಿನ ಆದೇಶದವರೆಗೆ ಮರು ಪರೀಕ್ಷೆಗೆ ಅಧಿಸೂಚನೆ ಹೊರಡಿಸಬಾರದು ಎಂದು ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿ, ವಿಚಾರಣೆಯನ್ನು ಅ.10ಕ್ಕೆ ಮುಂದೂಡಿತು.
ಮರುಪರೀಕ್ಷೆ ನಡೆಸುವುದಾಗಿ ಹೇಳಿರುವ ಸರ್ಕಾರದ ಆದೇಶ ರದ್ದುಪಡಿಸಬೇಕು. ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಮೆಟ್ಟಿಲೇರಿದ್ದರು.
ಅರ್ಜಿ ಕುರಿತು ಸರ್ಕಾರ ಹಾಗೂ ಅಭ್ಯರ್ಥಿಗಳ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ಕೆಎಟಿಯ ನ್ಯಾಯಾಂಗ ಸದಸ್ಯ ಟಿ. ನಾರಾಯಣ ಸ್ವಾಮಿ ನೇತೃತ್ವದ ಪೀಠ, ಆ ಅರ್ಜಿಗಳನ್ನು ಜು.19ರಂದು ವಜಾಗೊಳಿಸಿತ್ತು. ದೊಡ್ಡ ಮಟ್ಟದಲ್ಲಿ ಹಗರಣ ನಡೆದಿದೆ. ಜತೆಗೆ, ನೇಮಕಾತಿ ಪ್ರಾಧಿಕಾರದ ಮೇಲೆಯೇ ಆರೋಪಗಳಿರುವ ಹಿನ್ನೆಲೆಯಲ್ಲಿ ಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆಗೆ ಆದೇಶಿಸಲಾಗಿದೆ ಎಂದು ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆರ್. ಸುಬ್ರಹ್ಮಣ್ಯ ಹೇಳಿದ್ದರು. ಸರ್ಕಾರದ ವಾದ ಮಾನ್ಯ ಮಾಡಿದ್ದ ಕೆಎಟಿ ಅರ್ಜಿ ವಜಾಗೊಳಿಸಿತ್ತು. ಹಾಗಾಗಿ ಅರ್ಜಿದಾರರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.
ಯುವ ದಸರಾದಲ್ಲಿ ಅಪ್ಪು ಆರಾಧಾನೆ… ಭಾರವಾದ ಮನಸ್ಸಲ್ಲೇ ಟೀಸರ್​ ನೋಡಿ ಕಣ್ಣೀರಿಟ್ಟ ಅಶ್ವಿನಿ

ಕಬ್ಬಿಣದ ತಂತಿಗಳಿಂದಲೇ ಗೂಡು ಕಟ್ಟಿಕೊಂಡ ಕಾಗೆ! ದಕ್ಷಿಣ ಕನ್ನಡದಲ್ಲಿ ಅಪರೂಪದ ದೃಶ್ಯ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + one =
Remember me
