ಬೆಂಗಳೂರು:ರೇಡಿಯೋ ಜಾಕಿಯಾಗಿ ಅಸಂಖ್ಯಾತ ಜನರ ಮನಗೆದ್ದಿದ್ದ ಆರ್​ಜೆ ರಚನಾ ಇನ್ನಿಲ್ಲ. ಮಂಗಳವಾರ 39 ವರ್ಷದ ರಚನಾ, ಮಂಗಳವಾರ ಹೃದಯಾಘಾತದಿಂದ ನಿಧನರಾದರು.
ರೇಡಿಯೋ ಮಿರ್ಚಿಯಲ್ಲಿ ರೇಡಿಯೋ ಜಾಕಿಯಾಗಿ ಕೆಲಸ ಮಾಡುತ್ತಿದ್ದ ರಚನಾ, ತನ್ನ ಮಾತಿನ ಮೂಲಕವೇ ಲಕ್ಷಾಂತರ ಅಭಿಮಾನಿಗಳ ಮನ ಗೆದ್ದಿದ್ದರು. ಫಟಾಫಟ್​ ಮಾತಿನ ಮೂಲಕ ಜನರ ಮನಗೆದ್ದಿದ್ದ ಮುದ್ದು ಮುಖದ ರಚನಾ, 7 ವರ್ಷ ಆರ್​ಜೆ ಆಗಿ ಕೆಲಸ ಮಾಡಿದ್ದರು. ರಾಜ್ಯಾದ್ಯಂತ ಮನೆಮಾತಾಗಿದ್ದ ರಚನಾ, ಬಹಳ ಚಿಕ್ಕ ವಯಸ್ಸಿಗೇ ಬದುಕಿನ ಪಯಣ ಮುಗಿಸಿದ್ದಾರೆ.
ಕೆಲ ವರ್ಷಗಳ ಹಿಂದೆ ಕೆಲಸ ಬಿಟ್ಟು ಮನೆಯಲ್ಲೇ ಇದ್ದ ರಚನಾ, ಇತ್ತೀಚಿಗೆ ಜೆಪಿ ನಗರದ ಅಪಾರ್ಟ್​ಮೆಂಟ್​ನಲ್ಲಿ ಒಬ್ಬಂಟಿಯಾಗಿ ವಾಸವಿದ್ದರು. ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ. ಮಂಗಳವಾರ ಮನೆಯಲ್ಲೇ ಹೃದಯಾಘತಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ.

ರಕ್ಷಿತ್​ ಶೆಟ್ಟಿ ನಟನೆಯ ‘ಸಿಂಪಲ್ಲಾಗಿ ಒಂದ್​ ಲವ್​ ಸ್ಟೋರಿ’ ಸಿನಿಮಾದಲ್ಲಿ ಆರ್​ಜೆ ರಚನಾ ಸಹೋದರಿ ಪಾತ್ರಕ್ಕೆ ಬಣ್ಣ ಹಚ್ಚಿದ್ದರು. ರೇಡಿಯೋ ಸಿಟಿ, ರೇಡಿಯೋ ಮಿರ್ಚಿ ಸೇರಿದಂತೆ ಮುಂತಾದ ಎಫ್​ಎಂಗಳಲ್ಲಿ ಆರ್​ಜೆ ಆಗಿ ಕೆಲಸ ಮಾಡಿದ್ದರು.
ಸಿಎಂ, ಸಚಿವರು, ಶಾಸಕರ ವೇತನದಲ್ಲಿ ಭರ್ಜರಿ ಹೆಚ್ಚಳ: ಯಾರಿಗೆ ಎಷ್ಟೆಷ್ಟು? ಇಲ್ಲಿದೆ ಡಿಟೇಲ್ಸ್​

‘ಶಿವಮೊಗ್ಗದ ಹರ್ಷ ಮೇಲೆ ಕೊತ್ತಂಬರಿ ಸೊಪ್ಪು ತರಲು ಹೋದ… ಹುಡುಗಿ ಜತೆ ಹೋದ… ಕೇಸ್ ಇಲ್ಲ’

ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನ ಮೇಲೂ ದಾಖಲಾಗಿತ್ತು 4 ಪ್ರಕರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 13 =
Remember me
