ಮೈಸೂರು:ಮೈಸೂರಿನಿಂದ ಸೋಮವಾರ ಬೆಳಗ್ಗೆ ಭಾರತ್​ ಜೋಡೋ ಯಾತ್ರೆ ಮಂಡ್ಯ ಜಿಲ್ಲೆಯನ್ನು ಪ್ರವೇಶಿಸಿದ್ದು, ಮತ್ತೆ ವಾಪಸ್​ ಮೈಸೂರಿಗೆ ಆಗಮಿಸಿದ ಕಾಂಗ್ರೆಸ್​ ನಾಯಕ ರಾಹುಲ್​ಗಾಂಧಿ ಚಾಮುಂಡಿ ಬೆಟ್ಟದಲ್ಲಿ ಶ್ರೀಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಅತ್ ಕಾಂಗ್ರೆಸ್​ನ ಅಧಿನಾಯಕಿ ಸೋನಿಯಾ ಗಾಂಧಿ ಅವರು ದೆಹಲಿಯಿಂದ ಮೈಸೂರಿಗೆ ಆಗಮಿಸಿದರು.

ಚಾಮುಂಡಿ ದರ್ಶನ ಪಡೆದು ಮತ್ತೆ ಶ್ರೀರಂಗಪಟ್ಟಣಕ್ಕೆ ಹಿಂತಿರುಗಿರುವ ರಾಹುಲ್​ಗಾಂಧಿ, ಪರಿವರ್ತನ ಶಾಲೆಯಲ್ಲಿ ನಡೆಯುವ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನದ ಊಟದ ಬಳಿಕ ಪಾದಯಾತ್ರೆ ಮುಂದುವರಿಯಲಿದೆ.

ಅತ್ತ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ ಅವರನ್ನ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುನಿಯಪ್ಪ, ಎಂ.ಬಿ. ಪಾಟಿಲ್ ಸೇರಿದಂತೆ ರಾಜ್ಯ ಕಾಂಗ್ರೆಸ್​ ನಾಯಕರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ಕೆಲ ಕಾಲ ಇರುವ ಸೋನಿಯಾ, ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!

ತಂದೆ ಸಾಲಕ್ಕೆ ಮಗನಿಂದ ಬೆತ್ತಲೆ ಪೂಜೆ ಮಾಡಿಸಿದ ದುರುಳರು! ಕೊಪ್ಪಳದಲ್ಲಿ ಅಮಾನವೀಯ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 6 =
Remember me
