ಬೆಂಗಳೂರು:ಸಿದ್ದರಾಮಯ್ಯ, ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಅವರೇ ನಿಮ್ಮ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ನೀವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲಿಸಬೇಕು. ಒಂದು ಸ್ಥಾನ ಕೂಡ ಕಡಿಮೆ ಆಗಬಾರದು ಎಂದು ರಾಜ್ಯದ ನಾಯಕರಿಗೆ ರಾಷ್ಟ್ರ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ಕೊಟ್ಟಿದ್ದಾರೆ.
ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದ ರಾಹುಲ್ ಗಾಂಧಿ, ಮುಂದಿನ ವಿಧಾನಸಭಾ ಚುನಾವಣೆಯ ರೂಪುರೇಷೆ ಕುರಿತು ಚರ್ಚಿಸಿದರು. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯ್ಲಿ ಸೇರಿದಂತೆ ಹಿರಿಯ ನಾಯಕರ ಉಪಸ್ಥಿತರಿದ್ದರು. ರಾಜ್ಯದಲ್ಲಿ 150 ಸೀಟು ಗೆಲ್ಲಬೇಕು. ಒಂದು ಸ್ಥಾನ ಕೂಡ ಕಡಿಮೆ ಆಗಬಾರದು. ಪಕ್ಷ ನಿಷ್ಠೆಯ ಮೆರಿಟ್ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ. ಹಿರಿಯ ನಾಯರೆಲ್ಲರೂ ಒಟ್ಟಿಗೆ ಹೋಗಬೇಕು. ಪ್ರತಿ ಕ್ಷೇತ್ರಕ್ಕೂ ನಾಯಕರು ಭೇಟಿ ಕೊಡಬೇಕು. ನೀವು ಕರೆದರೆ ನಾನು ರಾಜ್ಯದ ಮೂಲೆ ಮೂಲೆಗೂ ಬರುತ್ತೇನೆ. ಆದ್ರೆ 150 ಸ್ಥಾನ ಗೆಲ್ಲಿಸಬೇಕು ಎಂದು ತಾಕೀತು ಮಾಡಿದರು.

ಕರ್ನಾಟಕದಲ್ಲಿ ಉದ್ಯೋಗ ಅವಕಾಶ ಇಲ್ಲ. ಇದು ಚುನಾವಣೆ ವಿಚಾರ ಆಗಬೇಕು. ಆ ನಿಟ್ಟಿನಲ್ಲಿ ಹೋರಾಟ ಮಾಡಿ. ರೈತ ವಿರೋಧಿ ಕಾಯ್ದೆಯನ್ನು ಬೆಜೆಪಿ ತಂದಿತು. ರೈತರಿಗೆ ಬಿಜೆಪಿಯಿಂದ ಆದಾಯ ಕಡಿತ ಆಗಿದೆ. ಮೋದಿ ಭ್ರಷ್ಟಾಚಾರದ ವಿರುದ್ಧ ಮಾತನಾಡತ್ತಿದ್ದರು. ಈಗ ಕರ್ನಾಟಕದಲ್ಲಿ ಶೇ.40 ಕಮಿಷನ್ ಸರ್ಕಾರ ಇದೆ. ಭ್ರಷ್ಟಾಚಾರ ಇದೆ ಅಂತ ನಾವು ಹೇಳುತ್ತಿಲ್ಲ. ಶೇ.40 ಕಮಿಷನ್ ಇದೆ ಅಂತ ಗುತ್ತಿಗೆದಾರರು ಹೇಳ್ತಿದ್ದಾರೆ. ಬಡವರ ದುಡ್ಡು ಶ್ರೀಮಂತರಿಗೆ ಬಿಜೆಪಿ ಹಂಚುತ್ತೆ. ಕೋಮು ವಿಚಾರ ಇಟ್ಟುಕೊಂಡು ದೇಶ ವಿಭಜನೆ‌ ಮಾಡುತ್ತೆ. ಪ್ರಮುಖ ಸಮಸ್ಯೆ ಬಗ್ಗೆ ಅವರು ಮಾತನಾಡಲ್ಲ. ಭಾವನಾತ್ಮಕ ವಿಚಾರ ಹರಡುವುದು ಅವರ ಕೆಲಸ. ದೇಶ ಒಡೆಯುವುದು ಅವರ ಕೆಲಸ ಎಂದು ರಾಹುಲ್​ ಗಾಂಧಿ ಆಕ್ರೋಶ ಹೊರಹಾಕಿದರು.
ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಸಂಘಟನೆ ‌ಮಾಡುತ್ತಿದೆ. ಚುನಾವಣೆಯಲ್ಲಿ ಯುವಕರು ಮತ್ತು ಮಹಿಳೆಯರಿಗೆ ಆದ್ಯತೆ ನೀಡಿ. ಇದರಿಂದ ರಾಜ್ಯದಲ್ಲಿ ಹೊಸ ಕಾಂಗ್ರೆಸ್ ಉದಯ ಆಗುತ್ತೆ. ಪ್ರಸ್ತುತ ಸಮಸ್ಯೆಗಳ ಮೇಲೆ ಹೋರಾಟ ‌ಮಾಡಿ. ಸಿದ್ದರಾಮಯ್ಯ ಸರ್ಕಾರದ ಸಾಧನೆ ಬಗ್ಗೆ ಜನರಿಗೆ ತಿಳಿಸಿ. 150 ಕ್ಷೇತ್ರದಲ್ಲಿ ಗೆಲ್ಲಲೇಬೇಕು. ಒಂದು ಕೂಡ ಕಡಿಮೆ ಆಗಬಾರದರು ಎಂದು ಕಾಂಗ್ರೆಸ್​ ನಾಯಕರು ಮತ್ತು ಕಾರ್ಯಕರ್ತರಿಗೆ ರಾಹುಲ್​ ಗಾಂಧಿ ಕರೆ ನೀಡಿದರು.
ನಾನೀಗ ಗರ್ಭಿಣಿ, ನನ್ನನ್ನು ತಬ್ಬಲಿ ಮಾಡಿಬಿಟ್ರು… ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮೇಘನಾ

ಬಾಲ್ಯ ವಿವಾಹ ಮಾಡಿದ್ರು, ತಾಳಿ ಬಿಚ್ಚಿಸಿ SSLC ಪರೀಕ್ಷೆಗೆ ಕಳಿಸಿದ್ರು! 2 ದಿನ ಆಗ್ತಿದ್ದಂತೆ ಪಾಲಕರಿಗೆ ಕಾದಿತ್ತು ಶಾಕ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one + 5 =
Remember me
