ಶಿವಮೊಗ್ಗ:ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗಕ್ಕೆ ತನ್ನ 3 ಎಕರೆ ಅಡಕೆ ತೋಟ ಬಲಿಯಾಗುವ ಸುದ್ದಿ ಕೇಳಿ ಕಂಗಾಲಾಗಿದ್ದ ರೈತನಿಗೆ ಸೂಕ್ತ ಪರಿಹಾರವೂ ಸಿಗುವ ಭರವಸೆ ಕಾಣದೆ ಮನನೊಂದು ಶುಕ್ರವಾರ ಬೆಳಗ್ಗೆ ಸಾವಿನ ಮನೆಯ ಕದ ತಟ್ಟಿದ ಮನಕಲಕುವ ಘಟನೆ ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದಲ್ಲಿ ಸಂಭವಿಸಿದೆ.
ಹಾರೋಗೊಪ್ಪ ಗ್ರಾಮದ ಅರುಣ್ ನಾಯ್ಕ (35) ಆತ್ಮಹತ್ಯೆ ಮಾಡಿಕೊಂಡ ರೈತ. ಶಿವಮೊಗ್ಗ-ಶಿಕಾರಿಪುರ ರೈಲ್ವೆ ಮಾರ್ಗಕ್ಕೆ ಪ್ರಾಥಮಿಕ ಹಂತದ ಸರ್ವೇ ಕಾರ್ಯ ಮುಗಿದಿದ್ದು, ರೈತರ ಜಮೀನುಗಳನ್ನು ಸ್ವಾಧೀನ ಪಡಿಸಿಕೊಂಡಿರುವ ಕೆಐಎಡಿಬಿ(ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ) ಪರಿಹಾರ ವಿತರಣಾ ಕಾರ್ಯ ಕೈಗೊಂಡಿದೆ. ಶಿಕಾರಿಪುರ ತಾಲೂಕು ಎಳೆನೀರು ಕೊಪ್ಪ ಗ್ರಾಮದಲ್ಲಿ ತಂದೆ ತಿಮ್ಮಾನಾಯ್ಕ ಹೆಸರಿನಲ್ಲಿರುವ ಸರ್ವೇ ನಂಬರ್ 13/13 14/13 ರಲ್ಲಿ ಅರುಣ್‌ನಾಯ್ಕಗೆ ಸೇರಿದ ಮೂರು ಎಕರೆ ಅಡಕೆ ತೋಟ ರೈಲ್ವೆ ಕಾಮಗಾರಿಗೆ ಸ್ವಾಧೀನವಾಗಿದೆ. ಇವರ ಜಮೀನಿಗೆ ಒಂದು ಎಕರೆಗೆ 5 ಲಕ್ಷ ರೂ. ನಿಗದಿಪಡಿಸಿ ನೋಟಿಸ್ ಜಾರಿ ಮಾಡಲಾಗಿತ್ತು.
ಕಾಮಗಾರಿ ನಡೆಸುತ್ತಿರುವ ವೇಳೆ ವಿರೋಧ ವ್ಯಕ್ತಪಡಿಸಿದ ಅರುಣ್ ನಾಯ್ಕ, ಎಕರೆಗೆ 5 ಲಕ್ಷ ರೂ. ಪರಿಹಾರ ನೀಡಿದರೆ ಅನ್ಯಾಯವಾಗುತ್ತದೆ. ಪ್ರಸ್ತುತ 30 ರಿಂದ 40 ಲಕ್ಷ ರೂ. ಪ್ರತಿ ಎಕರೆ ನಡೆಯುತ್ತಿದ್ದು ಅಡಕೆ ತೋಟಕ್ಕೆ ಕೇವಲ 5 ಲಕ್ಷ ರೂ. ಪರಿಹಾರ ನೀಡಿದರೆ ನಮ್ಮ ಬದುಕು ಬೀದಿಗೆ ಬಂದು ನಿಲ್ಲಲಿದೆ ಎಂದು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದ ಎನ್ನಲಾಗಿದೆ. ಅಧಿಕಾರಿಗಳಿಂದ ನಿರೀಕ್ಷಿತ ಉತ್ತರ ದೊರೆಯದ ಕಾರಣ ಮನನೊಂದು ತನ್ನ ಅಡಕೆ ತೋಟದಲ್ಲಿ ಶುಕ್ರವಾರ ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಅರುಣ್ ನಾಯ್ಕಗೆ ಪತ್ನಿ, ಪುತ್ರ, ಪುತ್ರಿ, ತಂದೆ-ತಾಯಿ, ಇಬ್ಬರು ಸಹೋದರರಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಥೂ ಇದೆಂಥಾ ಅಸಹ್ಯ? ಅಣ್ಣ-ತಂಗಿ ನಡುವೆಯೇ ಅಕ್ರಮ ಸಂಬಂಧ, ಅಡ್ಡಿಬಂದ ತಾಯಿಯನ್ನೇ ಕೊಂದ ಕಾಮುಕರು!

ತಣ್ಣಗಾಗದ ಹಿಜಾಬ್ ವಿವಾದ: ಶಾಲೆಯಲ್ಲಿ ಸರಸ್ವತಿ ಫೋಟೋ ಬೇಡ ಎಂದ ಮುಸ್ಲಿಂ ವಿದ್ಯಾರ್ಥಿನಿಯ ತಾಯಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen − nine =
Remember me
