ನೆಲಮಂಗಲ:ಧಾರಾಕಾರ ಮಳೆಯಿಂದಾಗಿ ಮನೆ ಮೇಲೆ ಪಕ್ಕದ ಗೋಡೆ ಕುಸಿದು ಬಿದ್ದು, ಸ್ಥಳದಲ್ಲೇ ಅಣ್ಣ-ತಂಗಿ ಇಬ್ಬರೂ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಿನ್ನಮಂಗಲ ಗ್ರಾಮದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ವೇಣುಗೋಪಾಲ(22) ಮತ್ತು ಕಾವ್ಯ(20) ಮೃತ ದುರ್ದೈವಿಗಳು. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಮೂಲದ ಅಣ್ಣ-ತಂಗಿ ಇಬ್ಬರೂ ವಿದ್ಯಾಭ್ಯಾಸದ ಸಲುವಾಗಿ ನೆಲಮಂಗಲದಲ್ಲಿ ಹನುಮಂತರಾಯಪ್ಪ ಎಂಬುವರಿಗೆ ಸೇರಿದ ಸೀಟಿನ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು.
ಸೋಮವಾರ ರಾತ್ರಿ ಎಂದಿನಂತೆ ಊಟ ಮುಗಿಸಿ ಅಣ್ಣ-ತಂಗಿ ಮತ್ತು ಸಂಬಂಧಿ ಸಂಪ್ರತ್​ ಮನೆಯಲ್ಲಿ ಮಲಗಿದ್ದರು. ಈ ವೇಳೆ ಮನೆ ಸಮೀಪ ಖಾಲಿ ನಿವೇಶನದ ಕಾಂಪೌಂಡ್ ಗೋಡೆ ಕುಸಿದು ತಗ್ಗು ಪ್ರದೇಶದಲ್ಲಿದ್ದ ಸೀಟಿನ ಮನೆ ಮೇಲೆ ಬಿದ್ದಿದ್ದು, ನಿದ್ರೆಯಲ್ಲಿದ್ದವರ ಪೈಕಿ ಇಬ್ಬರು ದುರಂತ ಅಂತ್ಯ ಕಂಡಿದ್ದಾರೆ.
ಅವಶೇಷದಡಿ ಸಿಲುಕಿದ್ದ ಅಣ್ಣ-ತಂಗಿ ಶವಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಗಾಯಗೊಂಡಿದ್ದ ಮತ್ತೊಬ್ಬನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾತ್ರೆ ಕೊಟ್ಟು ಗಂಡನನ್ನು ಗಾಢ ನಿದ್ರೆಗೆ ತಳ್ಳಿದ ಪತ್ನಿ ನಂತರ ಎಸಗಿದ್ದು ಅಸಹ್ಯ ಕೃತ್ಯ!

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

ಟ್ಯಾಂಕರ್​-ಕಾರು ನಡುವೆ ಭೀಕರ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − 15 =
Remember me
